ಕಡಬ: ಜಿಲ್ಲೆಯ ಪ್ರಥಮ ಸರಕಾರಿ ಗೋ ಶಾಲೆಯು ರಾಮಕುಂಜದಲ್ಲಿ ನಿರ್ಮಾಣಗೊಳ್ಳಲಿದ್ದು, ಅದರ ಶಂಕು ಸ್ಥಾಪನೆಯು ಜೂ. 29ರಂದು ಜರಗಿತು.

ದ.ಕ. ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಪಶುಪಾಲನಾ ವೈದ್ಯಕೀಯ ಇಲಾಖೆ ಮಂಗಳೂರು, ದ.ಕ. ಜಿಲ್ಲಾ ಪ್ರಾಣಿ ದಯಾ ಸಂಘ ಹಾಗೂ ರಾಮಕುಂಜ ಗ್ರಾ.ಪಂ. ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರ ಉಪಸ್ಥಿತಿಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೀನುಗಾರಿಕೆ, ಬಂದರು, ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಅವರು ಅಧ್ಯಕ್ಷತೆ ವಹಿಸಲಿದ್ದು, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *