ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಡದೆ ಮಳೆ ಸುರಿಯುತ್ತಿರುವ ಕಾರಣ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿದ್ದಾರೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.download

ಮಳೆ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ನಿಗಾ ವಹಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದರೆ ಎಲ್ಲಾ ಮುಂಜಾಗೃತೆ ವಹಿಸಿ ಕಾರ್ಯ ನಿರ್ವಹಿಸಲು ಶಾಲೆಗಳಿಗೆ ಸೂಚಿಸಲಾಗಿದೆ. ಮಕ್ಕಳು ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ನೀಡಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

‘ಶಾಲೆಗೆ ಬಂದಿರುವ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಯಾ ತಾಲ್ಲೂಕುಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ರಜೆ ನಿರ್ಧಾರ ಕೈಗೊಳ್ಳಲು ತಹಶೀಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ಹವಾಮಾನ ಇಲಾಖೆ ಗುರುವಾರ ಯಲ್ಲೋ ಅಲರ್ಟ್ ಘೋಷಿಸಿದೆ. ಶುಕ್ರವಾರವೂ ಇದೇ ರೀತಿ ಮಳೆಯಾದರೆ, ಪರಿಸ್ಥಿತಿ ಅವಲೋಕಿಸಿ ಶಾಲೆಗಳಿಗೆ ರಜೆ ನೀಡುವ ಬಗ್ಗೆ ನಿರ್ಧರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

By suddi9

Leave a Reply

Your email address will not be published. Required fields are marked *