ಮಂಗಳೂರು: ನಾಪತ್ತೆಯಾಗಿದ್ದ ಯುವಕ ಶವವಾಗಿ ಕೂಳೂರಿನ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಾವೂರಿನ ಯುವಕ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದು, ಜು.04ರಂದು ಸೋಮವಾರ ಶವವಾಗಿ ಪತ್ತೆಯಾಗಿದ್ದಾನೆ. ಮೃತ ಯುವಕನನ್ನು ಕಾವೂರು ನಿವಾಸಿ ಚೇತನ್ ಕುಮಾರ್(28) ಎಂದು ಗುರುತಿಸಲಾಗಿದೆ.WhatsApp Image 2022-07-04 at 11.02.09 AM

ಚೇತನ್ ಕುಮಾರ್ ಎರಡು ದಿನಗಳ ಹಿಂದೆ ನಾಪತ್ತೆಯಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಕೂಳೂರು ಸೇತುವೆಯಲ್ಲಿ ಶವವೊಂದು ಪತ್ತೆಯಾಗಿದ್ದು, ಶವವನ್ನು ನಾಪತ್ತೆಯಾಗಿದ್ದ ಚೇತನ್ ಎಂದು ಗುರುತಿಸಲಾಗಿದೆ.

By suddi9

Leave a Reply

Your email address will not be published. Required fields are marked *