ಕಾರ್ಕಳ : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಪುನಾರು ಶಾಲೆಯ ಬಳಿ ವರದಿಯಾಗಿದೆ.ವಿನೋದ ಪ್ರಭು (60) ಆತ್ಮಹತ್ಯೆ ಮಾಡಿಕೊಂಡವರು.

ವಿನೋದರವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಇದೆ ಕಾರಣದಿಂದ ಇವರು ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.
ಜುಲೈ 03ರಂದು ಮನೆಯ ಎದುರುಗಡೆ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
