ಮೂಡುಬಿದಿರೆ: ಆಳ್ವಾಸ್ ಕಾಲೇಜು ಮೂಡುಬಿದಿರೆ ಹಾಗೂ ಮಂಗಳೂರು ವಿ.ವಿ ದೈಹಿಕ ಶಿಕ್ಷಣ ವಿಭಾಗದ ಜಂಟಿ ಆಶ್ರಯದಲ್ಲಿ ಎರಡು ದಿನಗಳು ನಡೆಯು ವ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ವೇಟ್‌ಲಿಫ್ಟ್ ಚಾಂಪಿಯನ್‌ಶಿಪ್‌ಗೆ ಸ್ಕೌಟ್-ಗೈಡ್ಸ್ ಕನ್ನಡಭವನದಲ್ಲಿ ಜು.೨೫ರಂದು ಸೋಮವಾರ ಚಾಲನೆ ನೀಡಲಾಯಿತು.

ಶಾಸಕ ಉಮಾನಾಥ ಕೋಟ್ಯಾನ್ ಚಾಂಪಿಯನ್‌ಶಿಪ್‌ಗೆ ಚಾಲನೆ ನೀಡಿ, ಕ್ರೀಡೆಗಳಲ್ಲಿ ಇತರರೊಂದಿಗೆ ಸ್ಪರ್ಧೆ ನಡೆಯುವುದು ಮಾತ್ರವಲ್ಲ, ಕ್ರೀಡಾಪಟುಗಳ ಸಾಮರ್ಥ್ಯವೂ ಹಂತಹ೦ತವಾಗಿ ಹೆಚ್ಚುತ್ತದೆ. ಆರೋಗ್ಯಪೂರ್ಣ ಸ್ಪರ್ಧೆಯಿಂದ ಕ್ರೀಡಾಕೂಟವು ಯಶಸ್ವಿಯಾಗುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಶಿರ್ವದ ಸೈಂಟ್ ಮೇರಿಸ್ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ವೇಣುಗೋಪಾಲಕೃಷ್ಣ ನೋಂಡ, ಮಂಗಳೂರು ವಿ.ವಿ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ, ವೀಕ್ಷಕ ಹರೀಶ್ ಗೌಡ ಉಪಸ್ಥಿತರಿದ್ದರು. ಕೋಚ್ ಪ್ರಮೋದ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರತ್ನಾಕರ ಪುತ್ತಿಲಾಯ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *