ಬಂಟ್ವಾಳ:ತಾಲ್ಲೂಕಿನ ಛಾಯಾಗ್ರಾಹಕರ ಸಂಘದ ವತಿಯಿಂದ ಜಿಲ್ಲಾ ಸಂಘದ ಬೆಳ್ಳಿಹಬ್ಬ ಪ್ರಯುಕ್ತ ಇದೇ 15ರಂದು ರಾತ್ರಿ ಬಿ.ಸಿ.ರೋಡ್ನ ಗಾಣದಪಡ್ಪು ಗದ್ದೆಯಲ್ಲಿ ‘ಹೊನಲು ಬೆಳಕಿನ ಕ್ರೀಡಾಕೂಟ’ ಏರ್ಪಡಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕ್ರೀಡಾ ಸಚಿವ ಕೆ.ಅಭಯಚಂದ್ರ ಜೈನ್ ಕ್ರೀಡಾಕೂಟ ಉದ್ಘಾಟಿಸುವರು. ಜಿ.ಪಂ.ಉಪಾಧ್ಯಕ್ಷ ಸತೀಶ ಕುಂಪಲ, ಸಂಘದ ಜಿಲ್ಲಾಧ್ಯಕ್ಷ ವಾಸುದೇವ ರಾವ್, ಇನ್ಸ್ಪೆಕ್ಟರ್ ಕೆ.ಯು.ಬೆಳ್ಳಿಯಪ್ಪ, ತಾ.ಪಂ.ಸದಸ್ಯ ಮಾಧವ ಎಸ್.ಮಾವೆ ಮತ್ತಿತರು ಗಣ್ಯರು ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಎನ್.ಆನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
