ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕರ್ಾರಿ ಬಸ್ ಟಿಕೇಟು ದರ ಇಳಿಕೆ ಮಾಡುವಂತೆ ಆಗ್ರಹಿಸಿ ಕ್ಷೇತ್ರ ಬಿಜೆಪಿ ಸಮಿತಿ ವತಿಯಿಂದ ಮಂಗಳವಾರ ಬೆಳಿಗ್ಗೆ ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ಸಮಿತಿ ಅಧ್ಯಕ್ಷ ಜಿ.ಆನಂದ ಮತ್ತಿತರರು ಇದ್ದಾರೆ.
ಸರ್ಕಾರಿ ಬಸ್ ಟಿಕೇಟು ದರ ಇಳಿಕೆಗೆ ಆಗ್ರಹ
ಕೇಂದ್ರ ಸರಕಾರವು ಕಳೆದ ಐದಾರು ತಿಂಗಳಿನಿಂದ ನಿರಂತರವಾಗಿ ಡೀಸೆಲ್ ಮತ್ತು ಪೆಟ್ರೋಲ್ ಮತ್ತಿತರ ಇಂಧನ ದರ ಇಳಿಕೆ ಮಾಡಿದ್ದರೂ ರಾಜ್ಯ ಸರ್ಕಾರ ಮಾತ್ರ ಸರ್ಕಾರಿ ಬಸ್ ಟಿಕೇಟು ದರ ಇಳಿಕೆ ಮಾಡದೆ ಜನಸಾಮಾನ್ಯರನ್ನು ಪೀಡಿಸುತ್ತಿದೆ ಎಂದು ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಜಿ.ಆನಂದ ಆರೋಪಿಸಿದ್ದಾರೆ.
ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕರ್ಾರಿ ಬಸ್ ಟಿಕೇಟು ದರ ಇಳಿಕೆ ಮಾಡುವಂತೆ ಆಗ್ರಹಿಸಿ ಕ್ಷೇತ್ರ ಬಿಜೆಪಿ ಸಮಿತಿ ವತಿಯಿಂದ ಮಂಗಳವಾರ ಬೆಳಿಗ್ಗೆ ರಸ್ತೆತಡೆ ನಡೆಸಿ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್, ಜಿ.ಪಂ.ಸದಸ್ಯರಾದ ಚೆನ್ನಪ್ಪ ಕೋಟ್ಯಾನ್, ನಳಿನಿ ಬಿ.ಶೆಟ್ಟಿ, ತಾ.ಪಂ.ಉಪಾಧ್ಯಕ್ಷೆ ವಿಲಾಸಿನಿ ಪೂಜಾರಿ ಮತ್ತಿತರರು ಮಾತನಾಡಿದರು.
ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಾಮ್ದಾಸ್ ಬಂಟ್ವಾಳ, ದೇವಪ್ಪ ಪೂಜಾರಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಎಂ. ತುಂಗಪ್ಪ ಬಂಗೇರ, ಪುರುಷ ಎನ್.ಸಾಲ್ಯಾನ್, ಜಿ. ಸದಾನಂದ ಮಲ್ಲಿ , ತನಿಯಪ್ಪ ಗೌಡ, ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಬಿ.ದಿನೇಶ್ ಭಂಡಾರಿ, ಸದಸ್ಯೆ ಸುಗುಣಾ ಕಿಣಿ, ಭಾಸ್ಕರ್ ಕಾಮಾಜೆ, ಚಂದ್ರಶೇಖರ ಟೈಲರ್, ತಾ.ಪಂ.ಮಾಜಿ ಉಪಾಧ್ಯಕ್ಷರಾದ ದಿನೇಶ್ ಅಮ್ಟೂರು, ಆನಂದ ಎ. ಶಂಭೂರು, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ರೊನಾಲ್ಡ್ ಡಿ’ಸೋಜ ಮತ್ತಿತರರು ಪಾಲ್ಗೊಂಡಿದ್ದರು.

