ಮುಂಬೈ: ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮದ ಎರಡು ಬಸ್‍ಗಳ ನಡುವೆ ಅಪಘಾತವಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಜವಾಹರ್-ಸಿಲ್ವಾಸ್ಸಾ ರಸ್ತೆಯಲ್ಲಿ ಘಟನೆ ನಡೆದಿದ್ದು, ಸಾರಿಗೆ ಸಂಸ್ಥೆಯ ಬಸ್‍ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ. ಪರಿಣಾಮ 20ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಪಾಲ್ಘರ್ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ. ಎರಡು ಬಸ್‍ಗಳ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಪಾಲ್ಘರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
