ಬಂಟ್ವಾಳ : ತಾಲೂಕಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಎಂಬಲ್ಲಿ ಭಾನುವಾರ ನಡೆದ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವರ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಉಡುಪಿ ಸೋಧೆ ಮಠ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಸರ್ವಾಂತರ್ಯಾಮಿ ಆಗಿರುವ ದೇವರನ್ನು ಅನುಭವ ರೂಪದಲ್ಲಿ ಕಾಣಲು ದೇವಸ್ಥಾನಗಳ ಜೀರ್ಣೋದ್ಧಾರಗೊಳಿಸುವ ಅಗತ್ಯವಿದೆ. ಆ ಮೂಲಕ ಭಕ್ತರಿಗೆ ದೇವರು ಸುಲಭವಾಗಿ ಒಲಿಯುತ್ತಾರೆ ಎಂದು ಉಡುಪಿ ಸೋಧೆ ಮಠ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಇಲ್ಲಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಭಾನುವಾರ ನಡೆದ ದೇÃವರ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿವಿಧ ಜಾತಿ ಮತ್ತು ಧರ್ಮಗಳ ದೇವರನ್ನು ಆರಾಧಿಸುವ ತುಳುನಾಡಿನಲ್ಲಿ ಮಾನವ ಜನ್ಮ ಸಾರ್ಥಕಗೊಳಿಸಲು ಪ್ರತಿಯೊಬ್ಬರ ಆತ್ಮ ಶುದ್ಧೀಕರನಗೊಳಿಸುವ ಅಗತ್ಯವಿದೆ ಎಂದರು. ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸದಸ್ಯೆ ಸುಲೋಚನ ಜಿ.ಕೆ.ಭಟ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮತ್ತಿತರರು ಶುಭ ಹಾರೈಸಿದರು.
ಮುಂಬಯಿ ಉದ್ಯಮಿ ಜಯರಾಮ ಶೆಟ್ಟಿ ಕಾಪು, ಪುತ್ತೂರು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಾಲಕೃಷ್ಣ ಬೋರ್ಕರ್, ಆರೆಸ್ಸೆಸ್ ಪ್ರಮುಖ್ ಸುಭಾಶ್ಚಂದ್ರ ಅಯ್ಯನಕಟ್ಟೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಮ್ಮು ರೈ ಹರ್ಕಾಡಿ, ಆಡಳಿತ ಸಮಿತಿ ಅಧ್ಯಕ್ಷ ಜಾರಪ್ಪ ಕುಲಾಲ್, ನಿವೃತ್ತ ಮುಖ್ಯಶಿಕ್ಷಕ ಶ್ರೀಪತಿ ಭಟ್ ಪುಂಚೋಡಿ, ಪ್ರಮುಖರಾದ ಕೆ.ಪ್ರಮೋದ್ ಕುಮಾರ್ ರೈ, ಟಿ.ಹರೀಂದ್ರ ಪೈ ನೈನಾಡು, ಮಹಾಬಲ ಗೌಡ, ವೀರೇಂದ್ರ ಅಮೀನ್ ಮತ್ತಿತರರು ಇದ್ದರು.
ಇದೇ ವೇಳೆ ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಮತ್ತು ಪುರೋಹಿತ ಪ್ರಶಾಂತ ಐತಾಳರ ಉಪಸ್ಥಿತಿಯಲ್ಲಿ ದೇವರ ಬಾಲಾಲಯ ಪ್ರತಿಷ್ಠೆ ನೆರವೇರಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಸೇಸಪ್ಪ ಕೋಟ್ಯಾನ್ ಇವರನ್ನು ಸನ್ಮಾನಿಸಲಾಯಿತು. ಸಮಿತಿ ಸದಸ್ಯ ಪ್ರಕಾಶ್ ಗಟ್ಟಿ ಬಸ್ತಿಕೋಡಿ ಸ್ವಾಗತಿಸಿ, ಯೋಗೀಶ್ ಕಲಸಡ್ಕ ಪ್ರಾಸ್ತಾವಿಕ ಮಾತನಾಡಿದರು. ಸುರೇಶ್ ಉರುಡಾಯಿ ವಂದಿಸಿದರು. ಶಿವರಾಜ್ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು.
