ಬಂಟ್ವಾಳ: ಸರ್ಕಾರವು ವಿವಿಧ ಭಾಷಾ ಅಕಾಡೆಮಿಗಳನ್ನು ಕೇವಲ ಅಧ್ಯಕ್ಷ ಹುದ್ದೆ ಸೃಷ್ಟಿಗೆ ಮಾಡಿಲ್ಲ. ಇದರಿಂದಾಗಿ ವಿವಿಧ ರೀತಿಯಲ್ಲಿ ಭಾಷಾ ಬೆಳವಣಿಗೆಗೆ ಶ್ರಮಿಸುತ್ತಿರುವ ಸಾಹಿತಿಗಳು ಮತ್ತು ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಯುವಜನತೆಗೆ ಭಾಷಾ ಪ್ರಾಧಾನ್ಯತೆ ಬಗ್ಗೆ ಅರಿವು ಮೂಡಿಸುವ ಮಹತ್ತರ ಜವಾಬ್ದಾರಿ ಅಕಾಡೆಮಿಗೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಕನರ್ಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಬಂಟ್ವಾಳ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ವತಿಯಿಂದ ಬಂಟ್ವಾಳದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ‘ಬ್ಯಾರಿ ಸಾಹಿತ್ಯ ಸಾಂಸ್ಕೃತಿಕ ಮೇಳ’ ಉದ್ಘಾಟಿಸಿ ಅವರು ಮಾತನಾಡಿದರು.

23btl-beary

23btl-ramesh naik
ಅಕಾಡೆಮಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ, ಉಪಾಧ್ಯಕ್ಷೆ ಯಾಸ್ಮೀನ್ ಅಹ್ಮದ್, ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮತ್ತಿತರರು ಶುಭ ಹಾರೈಸಿದರು.
ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಬಿ.ಎ ಮುಹಮ್ಮದ್ ಅಲಿ, ಬಂಟ್ವಾಳ ಕೇಂದ್ರ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಮಾಜಿ ಅಧ್ಯಕ್ಷ ಪಿ.ಎ. ರಹೀಂ, ಮುಹಮ್ಮದ್ ಸಾದಿಕ್ ಬಂಟ್ವಾಳ, ಪುರಸಭಾ ಸದಸ್ಯ ಮೂನಿಶ್ ಅಲಿ, ಮಾಜಿ ಸದಸ್ಯ ರಿಯಾಝ್ ಹುಸೈನ್, ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಅಧ್ಯಕ್ಷ ಇಫಾಝತುಲ್ಲಾ, ಪ್ರಮುಖರಾದ ಬಿ.ಎ. ಸುಲೈಮಾನ್, ಲತೀಫ್ ಬಂಟ್ವಾಳ, ಬಿ.ಎ. ಮುಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಸಚಿವ ಬಿ. ರಮಾನಾಥ ರೈ, ರಾಷ್ಟ್ರೀಯ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ರಮೇಶ್ ನಾಯಕ್ ರಾಯಿ, ಹಿರಿಯ ಸಾಹಿತಿ ಜಿ. ಅಬ್ದುಲ್ ಖಾದರ್ ಗೋಳ್ತಮಜಲು, ಶಿಕ್ಷಕ ಅಬ್ದುಲ್ ರಝಾಕ್ ಅನಂತಾಡಿ, ಡಾ. ಇಸ್ಮಾಯಿಲ್ ಮತ್ತು ಡಾ. ಸಂಶುದ್ದೀನ್ ಸಹೋದರರನ್ನು ಸನ್ಮಾನಿಸಲಾಯಿತು. ಬಹುಭಾಷಾ ಕವಿ ಮುಹಮ್ಮದ್ ಬಡ್ಡೂರು ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಿತು.ಬಂಟ್ವಾಳದಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ‘ಬ್ಯಾರಿ ಸಾಹಿತ್ಯ ಸಾಂಸ್ಕೃತಿಕ ಮೇಳ’ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಹಾಗು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ರಮೇಶ ನಾಯಕ್ ಇವರನ್ನು ಸನ್ಮಾನಿಸಲಾಯಿತು.

ಅಕಾಡೆಮಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ಪುರಸಭಾಧ್ಯಕ್ಷೆ ವಸಂತಿ, ಉಪಾಧ್ಯಕ್ಷೆ ಯಾಸ್ಮಿನ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಪಿ.ಎ.ರಹೀಂ ,ಮತ್ತಿತರರು ಉಪಸ್ಥಿತರಿದ್ದರು.

ಅಕಾಡೆಮಿ ರಿಜಿಸ್ಟ್ರಾರ್ ಉಮರಬ್ಬ ಸ್ವಾಗತಿಸಿ, ಸದಸ್ಯ ಅಬ್ಬಾಸ್ ಕಿರಗುಂದ ಪ್ರಾಸ್ತಾವಿಕ ಮಾತನಾಡಿದರು. ಅಶ್ರಫ್ ಅಪೋಲೋ ಕಲ್ಲಡ್ಕ, ಸಮದ್ ಗಡಿಯಾರ, ಝಿಯಾದ್ ಕಲ್ಲಡ್ಕ ಇವರು ಬ್ಯಾರಿ ಧ್ಯೇಯ ಗೀತೆ ಹಾಡಿದರು. ಅಕಾಡೆಮಿ ಸದಸ್ಯ ಹಮೀದ್ ಪಡುಬಿದ್ರಿ ವಂದಿಸಿದರು. ಸದಸ್ಯ ಸಂಚಾಲಕ ಅಬ್ದುಲ್ ಹಮೀದ್ ಮತ್ತು ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *