ಮಂಗಳೂರು: ರಾಜ್ಯ ಸರಕಾರ ಟಿವಿ 9 ಚಾನೆಲ್ ಅನ್ನು ಪ್ರಸಾರ ಮಾಡದಂತೆ ಕೇಬಲ್ ಆಪರೇಟರ್ ಗಳ ಮೂಲಕ ತಡೆಯೊಡ್ಡಿರುವುದನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಬುಧವಾರ ಮುಂಜಾನೆ ಜಿಲ್ಲಾಧಿಕಾರಿ ಇಬ್ರಾಹಿಂ ಅವರಿಗೆ ಮನವಿಯನ್ನು ಸಲ್ಲಿಸಿತು.
`ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸ ರಾಜ್ಯ ಸರಕಾರ ಮಾಡುತ್ತಿದ್ದು, ಈ ಕೂಡಲೇ ಚಾನೆಲ್ ಮೇಲಿನ ನಿರ್ಬಂಧವನ್ನು ವಾಪಸ್ ಪಡೆಯಬೇಕು, ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಈ ಸಂದರ್ಭ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಒತ್ತಾಯಿಸಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ, ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


