ಬಂಟ್ವಾಳ: ಕಲ್ಪನೆ ಬಸ್ಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳಿಗೆ ಹೆಜ್ಜೇನು ಕಚ್ಚಿದ್ದು ಒರ್ವ ಗಂಭೀರವಾಗಿ ಗಾಯಗೊಂಡಿದ್ದು,ಇನ್ನಿಬ್ಬರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಾ.19 ರಂದು ಆದಿತ್ಯವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕಲ್ಪನೆ ಎಂಬಲ್ಲಿ ನಡೆದಿದೆ.

ಕಲ್ಪನೆ ನಿವಾಸಿ ಪೂವಪ್ಪ ( 61) ಗಂಭೀರವಾಗಿ ಗಾಯವಾಗಿದ್ದು,ಅವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿದ್ದು,ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಳಿದಂತೆ ಮಹೇಶ್ ಮತ್ತು ಗೋಪಾಲ್ ಇಬ್ಬರು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದು,ಚಿಕಿತ್ಸೆ ಪಡೆಯುತ್ತಿದ್ದಾರೆ.


ಪೂವಪ್ಪ ಅವರು ಲಾರಿ ಬಾಡಿ ವರ್ಕ್ ಕೆಲಸ ಮಾಡುತ್ತಿದ್ದು, ಭಾನುವಾರ ರಜೆಯಲ್ಲಿದ್ದರು. ವೈಯಕ್ತಿಕ ಕೆಲಸದ ಹಿನ್ನೆಲೆಯಲ್ಲಿ ಬಿಸಿರೋಡಿಗೆ ಬರುವುದಕ್ಕೆ ಬಸ್ ನಿಲ್ದಾಣದತ್ತ ನಡೆದುಕೊಂಡು ಬರುವ ವೇಳೆ ಘಟನೆ ನಡೆದಿದೆ.

ಉಳಿದ ಇರ್ವರು ತುಂಬೆ ಆಸ್ಪತ್ರೆಯಲ್ಲಿ ದಾಖಲಾಗಿದ್ದು,ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ಕೂಡಲೇ ಕಲ್ಪನೆ ರಿಕ್ಷಾ ಚಾಲಕರು ಘಟನೆಯಿಂದ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *