ಮೂಡುಬಿದಿರೆ:ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪಕ್ಷದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.


ಸ್ವರಾಜ್ಯ ಮೈದಾನದಲ್ಲಿ ಮಹಮ್ಮಾಯಿ ದೇವರ ದರ್ಶನ ಪಡೆದ ಅವರು ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪಿನಲ್ಲಿ ಸಾಗಿ ಬಂದರು. ಬಳಿಕ ಚುನಾವಣೆ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.


ಇದಕ್ಕು ಮೊದಲು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮುಸಂಘರ್ಷಕ್ಕೆ ನಿರುದ್ಯೋಗ ಸಮಸ್ಯೆಯೆ ಪ್ರಮುಖ ಕಾರಣ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಚುನಾಯಿಸಿದಲ್ಲಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಖಾಸಗಿ ಆಸ್ಪತ್ರೆಗೆ ಸಮಾನವಾದ ಚಿಕಿತ್ಸಾ ಸೌಳಭ್ಯ ಒದಗಿಸುವ ಸಂಕಲ್ಪ ತೊಟ್ಟಿದ್ದೇನೆ ಎಂದರು.


ಅಭಯಚಂದ್ರ ಕೃಷ್ಣನಾದರೆ ನಾನು ಅರ್ಜುನ:

ಈ ಬಾರಿಯ ಚುನಾವಣೆಯಲಿ ನನ್ನ ರಾಜಕೀಯ ಗುರು ಅಭಯಚಂದ್ರ ಕೃಷ್ಣನ ಪಾತ್ರ ನಾನು ಅರ್ಜುನನ ಪಾತ್ರ ನಿರ್ವಸುತ್ತೇನೆ. ನಮ್ಮೊಳಗೆ ವೈಮನಸ್ಸು ಉಂಟಾಗಿದೆ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇಂತಹ ಯಾವುದೇ ಘಟನೆ ನಡೆದಿಲ್ಲ, ಮುಂದೆಯೂ ಆಗುವುದಿಲ್ಲ. ಕ್ಷೇತ್ರಕ್ಕೆ ಅಭಯಚಂದ್ರರ ಕೊಡುಗೆಯನ್ನು ಯಾರೂ ಮರೆಯುವಂತಿಲ್ಲ. ಮೂಡುಬಿದಿರೆ-ಮುಲ್ಕಿಯನ್ನು ಮಾದರಿಯನ್ನಾಗಿಸುವ ಸಂಕಲ್ಪ ಮಾಡಿದ್ದೇನೆ, ಜನತೆ ಆಶೀರ್ವದಿಸಬೇಕೆಂದು ವಿನಂತಿಸಿದರು. ಮಾಜಿ ಸಚಿವ ಅಭಯಚಂದ್ರ ಜೈನ್, ಎಂಎಲ್‍ಸಿ ಹರೀಶ್ ಕುಮಾರ್, ಶಾಸಕ ಯು.ಟಿ ಖಾದರ್, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್, ದೇವಿಪ್ರಸಾದ್ ಶೆಟ್ಟಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ್, ಮಮತ ಗಟ್ಟಿ, ಶಾಲೆಟ್ ಪಿಂಟೊ, ಸುಪ್ರಿಯಾ ಡಿ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *