ಬಂಟ್ವಾಳ:ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಅಮ್ಟಾಡಿ ಗ್ರಾಮದ ಗೋರೆಮಾರ್ ನಿವಾಸಿ ಸಂದೀಪ್ ಲೋಬೋ (೩೮) ಎಂದು ಗುರುತಿಸಲಾಗಿದೆ.

ಇವರು ವೆಲ್ಡಿಂಗ್ ಕೆಲಸಕ್ಕಾಗಿ ಸ್ಥಳೀಯ ನಿವಾಸಿ ಆಕಾಶ್ ಎಂಬವರನ್ನು ಬೈಕಿನಲ್ಲಿ ಕೂರಿಸಿಕೊಂಡು ಬಿ.ಸಿ.ರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಸಹಸವಾರ ಆಕಾಶ್ ಗಾಯಗೊಂಡು ಆಸ್ಪತ್ರೆಗೆ ಸೇರ್ಪಡೆಯಾಗಿದ್ದಾರೆ ಎಂದು ಪುಂಜಾಲಕಟ್ಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *