ಬಂಟ್ವಾಳ: ಬಿ.ಸಿ.ರೋಡಿನ ಕೊಡಂಗೆ ಸರಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯರಾಗಿರುವ ಸುಧೀರ್ ಜಿ ಪ್ರಮಾಣ ವಚನದ ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅತಿಥಿಯಾಗಿದ್ದ ಬೆಂಜನಪದವು ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಅನಂತ ಪದ್ಮನಾಭ ಮಾತನಾಡುತ್ತಾ, ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಲು ಇಂತಹ ಸಂಘಗಳು ಪೂರಕ ವಾತಾವರಣವನ್ನು ಕಲ್ಪಿಸುತ್ತವೆ ಎಂದು ಹೇಳಿದರು.
.

ಮೊಡಂಜಾಪು ರೋಟರಿ ಕ್ಲಬ್ ಅಧ್ಯಕ್ಷರಾದ ಪಿ. ಎ ರಹೀಂ, ಅನುಗ್ರಹ ವಿದ್ಯಾಸಂಸ್ಥೆಯ ಸಂಚಾಲಕರಾದ ಶಾಹುಲ್ ಹಮೀದ್, ನಿವೃತ್ತ ಮುಖ್ಯ ಶಿಕ್ಷಕರಾದ ಅಮಾನುಲ್ಲಾ ಖಾನ್, ಮೊಡಂಕಾಪು ರೋಟರಿ ಕ್ಲಬ್ ಕಾರ್ಯದರ್ಶಿ ಅಲೆಗ್ಜಾಂಡರ್ ಲೋಬೊ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಹುಸೇನ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಇಸ್ಮಾಯಿಲ್ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಫೆಲಿಸಿಟಾಸ್ ಈವಾ ಗಲ್ಭಾವೋ ಸ್ವಾಗತಿಸಿದರು. ಸಹ ಶಿಕ್ಷಕ ಅಶೋಕ್ ಕುಮಾರ್ ವಂದಿಸಿದರು. ಸಹ ಶಿಕ್ಷಕಿ ಗೀತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.
