ಬಂಟ್ವಾಳ: ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಂಟ್ವಾಳ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಢಯಿತು.ಬಂಟ್ವಾಳ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ್ ಬಾಳಿಗೆ ಅವರು ಪಂದ್ಯಾಟವನ್ನು ಉದ್ಘಾಟಿಸಿ ಶುಭಹಾರೈಸಿದರು.

ಶ್ರೀ ದೇವಳದ ಆಡಳಿತ ಮೊಕ್ತೇಸರರಾದ ಆಶೋಕ್ ಶೆಣೈ, ಶಾಲಾ ಸಂಚಾಲಕರಾದ ಭಾಮಿ ನಾಗೇಂದ್ರನಾಥ್ ಶೆಣೈ, ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ , ದೈಹಿಕ ಶಿಕ್ಷಣ ಶಿಕ್ಷಕರ ಪರಿವೀಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್ , ಶಿಕ್ಷಣ ಸಂಯೋಜಕರಾದ ಸುಜಾತ,ಹಾಗೂ ಸುಧಾ, ಶಿಕ್ಷಕ,ರಕ್ಷಕ ಸಂಘದ ಅಧ್ಯಕ್ಷರಾದ ವಸಂತ ಮಲ್ಯ,ಬಂಟ್ವಾಳ ರೋಟರಿ ಕ್ಲಬ್ ಕಾರ್ಯದರ್ಶಿ ಸದಾಶಿವ ಬಾಳಿಗ, ಶಾಲಾ ಮುಖ್ಯೋಪಾಧ್ಯಾಯಿನಿ ರೋಶನಿ ತಾರಾ ಡಿಸೋಜ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಪ್ರಶಾಂತ್ ಭಂಡಾರ್ ಕಾರ್ : ಮತ್ತು ನಂದಾವರ ಗಣೇಶ್ ಶೆಣೈಯವರು ಅತಿಥಿಗಳಾಗಿ ಭಾಗವಹಿಸಿದರು.ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು.ಶಾಲಾ ಸಹ ಮುಖ್ಯೋಪಾಧ್ಯಾಯಿನಿ ಜಾನಕಿ ರಾಜೇಶ್ ವಂದಿಸಿದರು. ಶಿಕ್ಷಕ ಮುರಳೀಧರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
