ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳಘಟಕದ ವತಿಯಿಂದ ಕು.ಸೌಜನ್ಯಳ ಹತ್ಯಾ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಮರು ತನಿಖೆಗೆ ಆದೇಶಿಸಬೇಕು ತನ್ಮೂಲಕ ನೈಜ ಅಪರಾಧಿಗಳನ್ನು ಪತ್ತೆ ಹಚ್ಚಿ ಕು.ಸೌಜನ್ಯ ಹಾಗೂ ನೊಂದ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬಂಟ್ವಾಳ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು. ರಾಜ್ಯ ಸರ್ಕಾರವು ಮರು ತನಿಖೆಗೆ ಆದೇಶಿಸದೆ ನ್ಯಾಯ ಒದಗಿಸುವಲ್ಲಿ ವಿಫಲವಾದರೆ ಎಬಿವಿಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಮನವಿಯಲ್ಲಿ ಎಚ್ಚರಿಸಿದೆ.

ಹಾಗಯೇ ಸೌಜನ್ಯ ಹಾಗೂ ಸಂಬಂಧಿತ ಘಟನೆಯನ್ನು ದಾಳವಾಗಿಸಿಕೊಂಡು ಧಾರ್ಮಿಕ ಶ್ರದ್ದಾ ಕೇಂದ್ರಗಳ ಘನತೆ ಮತ್ತು ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಪ್ರಕರಣಗಳು ಕಂಡು ಬರುತ್ತಿದ್ದು ಇದನ್ನು ಕೂಡ ರಾಜ್ಯ ಸರ್ಕಾರ ಹತ್ತಿಕ್ಕಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಎಬಿವಿಪಿ ಬಂಟ್ವಾಳ ತಾಲೂಕು ಸಂಚಾಲಕರಾದ ಪ್ರತೀಕ್ ಬಂಟ್ವಾಳ ಹಾಗೂ ಪ್ರಮುಖರಾದ ಸುಶಾಂತ್ ,ಕಿಶೋರ್, ಇಂಚರಾ, ಪುನೀತ್ ಉಪಸ್ಥಿತರಿದ್ದರು.
