ಬಂಟ್ವಾಳ : ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿ ಎಂದು ಕೊಯಿಲ‌ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಭಾರತಿ ಕಾರಂತ್ ಹೇಳಿದರು.

ಬಂಟ್ಚಾಳ ತಾಲೂಕು ಕೊಯಿಲ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಕೇವಲ ಮಣ್ಣು ಹೊರುವ ಕೆಲಸ ಮಾತ್ರವಲ್ಲ ಅದು ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿಗೆ ಉತ್ತೇಜನ ನೀಡುತ್ತದೆ. ವಿದ್ಯಾರ್ಥಿಯಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆಯನ್ನು ಒದಗಿಸಿಕೊಡುತ್ತದೆ. ಸ್ವಚ್ಚತೆ ವ್ಯಕ್ತಿಗೆ ಮಾನಸಿಕ ಸ್ಥೈರ್ಯ ತುಂಬಿ ಹೊಂದಾಣಿಕೆ ಮನೋಭಾವವನ್ನು ಬೆಳೆಸುತ್ತದೆ ಎಂದು ಹೇಳಿದರು.

ಎಸ್.ವಿ.ಎಸ್. ಕಾಲೇಜಿನ ಪ್ರಾಂಶುಪಾಲ ಡಾ. ಸುಯೋಗವರ್ಧನ್ ಡಿ. ಎಂ.  ಅಧ್ಯಕ್ಷತೆ ವಹಿಸಿ, ನಾವೆಲ್ಲರೂ ಒಂದೇ ಎನ್ನುವ ಮನೋಭಾವ ಬೆಳೆಸುವ ಜತೆ ಕೀಳರಿಮೆಯನ್ನು ಹೋಗಲಾಡಿಸುತ್ತದೆ. ಜಾತಿ-ಧರ್ಮ, ಮೇಲು-ಕೀಳು ಎನ್ನುವ ಭೇದಭಾವವಿಲ್ಲದೆ ಎಲ್ಲರೂ ಒಂದೇ ಸೂರಿನಡಿಯಲ್ಲಿ ಒಟ್ಟಾಗಿ ಜೀವಿಸುವ ಭಾವೈಕ್ಯತೆಯ ಗುಣವನ್ನು ಬೆಳೆಸುವುದಕ್ಕೆ ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ಜಗದೀಶ್ ಕೊಯಿಲ, ಪಂಜಿಕಲ್ಲು ಪ್ರಗತಿಪರ ಕೃಷಿಕ ದೇವಪ್ಪ ಕುಲಾಲ್, ಲಯನ್ಸ್ ಕ್ಲಬ್ ರಾಯಿ-ಸಿದ್ಧಕಟ್ಟೆ ಕಾರ್ಯದರ್ಶಿ ಅನಿಲ್ ಪ್ರಭು, ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸುದರ್ಶನ್ ಬಿ., ಉಪಪ್ರಾಂಶುಪಾಲ ಲೆಪ್ಟಿನೆಂಟ್ ಪ್ರದೀಪ್ ಪೂಜಾರಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಸುಜಯಾ ನಾಗೇಶ್, ಯಶೋದರ ರೈ ದೇರಾಜೆ ಗುತ್ತು, ಎನ್.ಎಸ್.ಎಸ್. ಘಟಕ ನಾಯಕರಾದ ಪವನ್ ಮತ್ತು ಕೀರ್ತನಾ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎನ್.ಎಸ್.ಎಸ್. ಶಿಬಿರಾರ್ಥಿಗಳು ಪ್ರಾರ್ಥಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಶಿಬಿರಾಧಿಕಾರಿ ಶಶಿಧರ್ ಎಸ್. ಸ್ವಾಗತಿಸಿ, ಸಹಶಿಬಿರಾಧಿಕಾರಿ ರೂಪಾ ವಂದಿಸಿದರು. ಸಹಶಿಬಿರಾಧಿಕಾರಿ ಭವಿತಾ ಕೆ. ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *