ಬಂಟ್ವಾಳ: ” ಸಾಹಿತ್ಯದಿಂದ ಮಕ್ಕಳ ವ್ಯಕ್ತಿತ್ವ ಬೆಳವಣಿಗೆಯಾಗುತ್ತದೆ. ಪ್ರತಿಯೊಂದು ಮಗುವು ವಿಶೇಷ ಪ್ರತಿಭೆ ಹೊಂದಿರುತ್ತದೆ. ಸಾಹಿತ್ಯವು ಆ ಪ್ರತಿಭೆಗಳನ್ನು ಹೊರ ಹೊಮ್ಮಿಸಲು ಅಪಾರ ಅವಕಾಶವನ್ನು ಒದಗಿಸುತ್ತದೆ. ಸಾಹಿತ್ಯದಿಂದ ಸಮಾಜದಲ್ಲಿ ಧನಾತ್ಮಕ ಬದಲಾವಣೆಯ ಸಂಭ್ರಮ ಸಾಕಾರಗೊಳ್ಳುತ್ತದೆ ” ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ) ಬಂಟ್ಟಾಳ ಘಟಕದ ಅಧ್ಯಕ್ಷೆ ಶ್ರೀಕಲಾ  ಕಾರಂತ್ ರವರು ಹೇಳಿದ್ದಾರೆ.

ಮಂಚಿ ಕೊಳ್ನಾಡುವಿನ ಸರಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಬಂಟ್ವಾಳ ಘಟಕದಿಂದ ನಡೆದ ತಾಲೂಕು ಮಟ್ಟದ 2 ದಿನಗಳ ಸಾಹಿತ್ಯ ಸಂಭ್ರಮ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆ  ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಪ್ರಸಾದ್ ರೈ ತಿರುವಾಜೆ ಅಧ್ಯಕ್ಷತೆ ವಹಿಸಿದ್ದರು.

ಶಿಬಿರದಲ್ಲಿ ಭಾಸ್ಕರ್ ಅಡ್ವಾಳ ಸ್ವರಚಿತ ಕವನ ಹಾಗೂ ಕಥೆ ರಚನೆ, ರಮೇಶ ಬಾಯಾರು ಭಾಷಣ ಕಲೆ, ತುಳಸಿ ಕೈರಂಗಳ ಕಥೆ ರಚನೆ,  ಗೋಪಾಲಕೃಷ್ಣ ನೇರಳಕಟ್ಟೆ ಕವನ ರಚನೆ, ಶ್ರೀಕಲಾ ಕಾರಂತ ಅಳಿಕೆ ಬಾಲ ಸಾಹಿತ್ಯದ ಬಗ್ಗೆ ಮಾಹಿತಿ ನೀಡಿದರು.

ಗುತ್ತಿಗೆದಾರ ಗಣೇಶ ಪ್ರಭು ಮೋಂತಿಮಾರು, ಗೌರವ ಸಲಹೆಗಾರ ಬಾಲಕೃಷ್ಣ ಕಾರಂತ್ ಎರುಂಬು ,ಶಾಲಾ ಮುಖ್ಯೋಪಾಧ್ಯಾಯ ಸುಶೀಲಾ ವಿಟ್ಲ, ಸಾಹಿತಿಗಳಾದ ಭಾಸ್ಕರ್ ಅಡ್ವಾಳ ಹಾಗೂ ರಮೇಶ್ ಬಾಯಾರು, ಪರಿಷತ್ತಿನ ವಲಯ ಸಂಯೋಜಕ ರಾಧಾಕೃಷ್ಣ ಮೂಲ್ಯ ಅಮ್ಟೂರು , ಸಾಹಿತಿ ತುಳಸಿ ಕೈರಂಗಳ್ ಉಪಸ್ಥಿತರಿದ್ದರು.

ಶಿಬಿರ ಸಂಯೋಜಕ ಕಲಾವಿದ  ತಾರಾನಾಥ್ ಕೈರಂಗಳ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ನೇರಳಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು. ಶಾಲೆಯ ಶಿಕ್ಷಕ ವೃಂದದವರು  ಸಹಕರಿಸಿದರು. 

By suddi9

Leave a Reply

Your email address will not be published. Required fields are marked *