ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ “ಸಾಹಿತ್ಯ ತಾರೆ” ಪ್ರಶಸ್ತಿಗೆ  ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆ ಆಯ್ಕೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಪ್ರೌಢ ಶಾಲೆಯು ಮಕ್ಕಳ ಸ್ವರಚನೆಗಳಿರುವ ಶಾಲಾ ವಾರ್ಷಿಕ  ಹಸ್ತ ಪತ್ರಿಕೆ ಶಾರದಾವಾಣಿಯನ್ನು ಹಲವಾರು ವರ್ಷಗಳಿಂದ ಬಿಡುಗಡೆಗೊಳಿಸುತ್ತಿದೆ ಹಾಗೂ ಮಕ್ಕಳಲ್ಲಿ ಕಲೆ, ಸಾಹಿತ್ಯ ಸಂವರ್ಧನೆಗೆ ಪೋಷಕವಾಗುವ ಹಲವಾರು ಚಟುವಟಿಕೆಗಳನ್ನು ಉತ್ತಮವಾಗಿ ಸಂಘಟಿಸಿಕೊಂಡು ಬರುತ್ತಿರುದನ್ನು ಮಕ್ಕಳ ಕಲಾ ಲೋಕವು ಗುರುತಿಸಿ ಮಕ್ಕಳ ಕಲಾ ಲೋಕದ ಪ್ರಶಸ್ತಿ ಆಯ್ಕೆ ಸಮಿತಿಯು ಶ್ರೀ ಶಾರದಾ ಪ್ರೌಢ ಶಾಲೆಯ ಆಯ್ಕೆಯನ್ನು ಅಂತಿಮಗೊಳಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕವು ದ. 06 ರಂದು ಕಡೇಶಿವಾಲಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ  ನಡೆಯುವ 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ  ಈ  ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಗುವುದು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ. ಬಾಯಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *