ಬಂಟ್ವಾಳ: ವಿದ್ಯೆ ಇದ್ದರೆ ಸಾಲದು ವಿನಯ, ತಾಳ್ಮೆ, ಉತ್ತಮ ಸಂಸ್ಕಾರವಿದ್ದರೆ ಮಾತ್ರ ಒಳ್ಳೆಯ ವ್ಯಕ್ತಿಯಾಗಬಹುದು, ತುಳುನಾಡಿನ ಸಂಸ್ಕೃತಿ, ಕಟ್ಟುಪಾಡುಗಳಿಗೆ ತನ್ನದೇ ಆದ ಸ್ಥಾನಮಾನವಿದೆ, ಅದನ್ನು ಯಾರು ಬದಲಾಯಿಸಲು ಹೋಗಬಾರದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್ ಹೇಳಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯದ ವತಿಯಿಂದ ನರಿಕೊಂಬು ಗ್ರಾಮದ ಮೊಗರ್ನಾಡು ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಅನ್ನಪೂರ್ಣ ಸಭಾಭವನದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು.

ತುಳುನಾಡಿನಲ್ಲಿ ಹಿರಿಯರ ಕಾಲದಿಂದಲೂ ಮಾತೆಯರಿಗೆ ಉತ್ತಮ ಸ್ಥಾನ ದೊರೆತಿದೆ. ಅದನ್ನು ಸತ್ಕಾರ್ಯದಲ್ಲಿ ಬಳಸಬೇಕು, ಪಾಶ್ಚಾತ್ಯ ಸಂಸ್ಕ್ರತಿಗೆ ಮಾರುಹೋಗದೆ ನಮ್ಮ‌ ತುಳುನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಬೆಳೆಸಿ ಧರ್ಮಾಧಿಕಾರಿ ಡಾ.ಹೆಗ್ಗಡೆಯವರ ದುಶ್ಚಟಮುಕ್ತ ಸಮಾಜ ನಿರ್ಮಾಣದ ಕನಸನ್ನು ನನಸು ಮಾಡೋಣ ಎಂದು ಹೇಳಿದರು.

ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಶಂಭೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬಂಟ್ವಾಳ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ರೋ.ಪ್ರಕಾಶ್ ಕಾರಂತ್ ನರಿಕೊಂಬು, ಭಜನಾ ಸಂಕೀರ್ತನೆಯನ್ನು ಉದ್ಘಾಟಿಸಿ ಶುಭಹಾರೈಸಿದರು.

ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಸಿಡಿಪಿಒ ಇಲಾಖೆಯ ನಿವೃತ್ತ ಯೋಜನಾಧಿಕಾರಿ ಸುಧಾ ಜೋಶಿ, ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕ ಪ್ರೇಮನಾಥ ಶೆಟ್ಟಿ, ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ ನ ಅಧ್ಯಕ್ಷ ಚಂದ್ರಹಾಸ್ ಕೋಡಿಮಜಲು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯದ ಅಧ್ಯಕ್ಷೆ ಲೀಡಿಯ ಪಿಂಟೋ, ನರಿಕೊಂಬು ಎ, ಬಿ ಒಕ್ಕೂಟಗಳ ಅಧ್ಯಕ್ಷರುಗಳಾದ ಕೃಷ್ಣಪ್ಪ ಸಪಲ್ಯ, ಜಯಂತ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಭಜನಾ ಶಿಕ್ಷಕ ಗಣೇಶ್ ನೇತೃತ್ವದಲ್ಲಿ ಕುಣಿತ ಭಜನಾ ತಂಡಗಳಿಂದ ಭಜನಾ ಸಂಕೀರ್ತನ ಕಾರ್ಯಕ್ರಮ ನೆರವೇರಿತು,                    ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಪ್ರಸ್ತಾವಿಸಿ, ಸಾಗತಿಸಿದರು.

ಸೇವಾ ಪ್ರತಿನಿಧಿ ಕುಸುಮಾವತಿ ವಂದಿಸಿದರು. ಸಂದೀಪ್ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಪ್ರತಿಭಾ ವಸಂತ್ ಸಹಕರಿಸಿದರು. 

By suddi9

Leave a Reply

Your email address will not be published. Required fields are marked *