ಕೈಕಂಬ: ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಜ.26ರಂದು ಶುಕ್ರವಾರ ಕಾವೂರು ವ್ಯವಸಾಯ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷ ಕೆ. ಹರಿಶ್ಚಂದ್ರ ಹಾಗೂ ನಿರ್ದೇಶಕ ಲೋಕೇಶ್ ಭಂಡಾರಿ ಆಗಮಿಸಿ ದೇವಸ್ಥಾನಕ್ಕೆ ದೇಣಿಗೆ ನೀಡಿದರು.

ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಬ್ರಹ್ಮಕಲಶ ಸಮಿತಿಯವರು ಆಗಮಿಸಿದ ಅತಿಥಿಗಳಿಗೆ ಶಾಲು, ಫಲವಸ್ತು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮ ಕಲಶ ಸಮಿತಿ ಗೌರವಾಧ್ಯಕ್ಷ ಕೊಂಜಾಲುಗುತ್ತು ದಿವಾಕರ ಶೆಟ್ಟಿ, ಅಧ್ಯಕ್ಷೆ ಅಮುಂಜೆಗುತ್ತು ಯಶೋಧ ಡಿ.ಶೆಟ್ಟಿ, ಕಾರ್ಯಾಧ್ಯಕ್ಷ ಅಮುಂಜೆಗುತ್ತು ಕೆ. ಕೃಷ್ಣಕುಮಾರ ಪೂಂಜ, ಪ್ರಧಾನ ಕಾರ್ಯದರ್ಶಿ ಸತ್ಯಪ್ರಸಾದ್ ಶೆಟ್ಟಿ ಅಮುಂಜೆಗುತ್ತು, ಅಮುoಜೆಗುತ್ತು ಸಂತೋಷ್ ಕುಮಾರ್ ಶೆಟ್ಟಿ, ಅಮುಂಜೆಗುತ್ತು ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *