ಕೈಕಂಬ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಅಮುಂಜೆ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಜ.26ರಂದು ಶುಕ್ರವಾರ ಉದ್ಯಮಿ ಪುತ್ತುಮೋನು ಬಟ್ಲಬೆಟ್ಟು ಅಮ್ಮುಂಜೆ, ಸೂರಲ್ಪಾಡಿ ಇವರು ದೇವಸ್ಥಾನಕ್ಕೆ ಆಗಮಿಸಿ ದೇಣಿಗೆ ನೀಡಿದರು ಇವರೊಂದಿಗೆ ಮೋಹನ್ ಮೇಲoಟ ಮುಂಬೈ ಇದ್ದರು.

ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಬ್ರಹ್ಮಕಲಶ ಸಮಿತಿಯವರು ಆಗಮಿಸಿದ ಅತಿಥಿಗಳಿಗೆ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮ ಕಲಶ ಸಮಿತಿ ಗೌರವಾಧ್ಯಕ್ಷ ಕೊಂಜಾಲುಗುತ್ತು ದಿವಾಕರ ಶೆಟ್ಟಿ, ಬ್ರಹ್ಮ ಕಲಶ ಸಮಿತಿ ಅಧ್ಯಕ್ಷೆ ಅಮುಂಜೆಗುತ್ತು ಯಶೋಧ ಡಿ.ಶೆಟ್ಟಿ, ಕಾರ್ಯಾಧ್ಯಕ್ಷ ಅಮುಂಜೆಗುತ್ತು ಕೆ. ಕೃಷ್ಣಕುಮಾರ ಪೂಂಜ, ಪ್ರಧಾನ ಕಾರ್ಯದರ್ಶಿ ಸತ್ಯಪ್ರಸಾದ್ ಶೆಟ್ಟಿ ಅಮುಂಜೆಗುತ್ತು, ಅಮುoಜೆಗುತ್ತು ಸಂತೋಷ್ ಕುಮಾರ್ ಶೆಟ್ಟಿ, ಅಮುಂಜೆಗುತ್ತು ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *