ಬಂಟ್ವಾಳ: ಸರ್ಕಾರಿ ನೌಕರರು ಜೀತ ಪದ್ಧತಿಯ ಬಗ್ಗೆ ಸದಾ ಜಾಗೃತರಾಗಿದ್ದು, ಸಾರ್ವಜನಿಕರಲ್ಲಿ ಅಧಿಕಾರಿಗಳು ಈ ಕುರಿತು ಅರಿವು ಮೂಡಿಸುವುದರೊಂದಿಗೆ ಜೀತ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಹೇಳಿದರು.

ಬಂಟ್ವಾಳ ತಾಲೂಕಾಡಳಿತದ ಸಭಾಂಗಣದಲ್ಲಿ ಶುಕ್ರವಾರ ನಡೆದ ಜೀತ ಪದ್ಧತಿ ನಿರ್ಮೂಲನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜೀತ ಪದ್ಧತಿ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು, ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕರಾದ ಆರ್ .ವಿಜಯ್, ಜನಾರ್ದನ್.ಜೆ, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು 

By suddi9

Leave a Reply

Your email address will not be published. Required fields are marked *