ಬಂಟ್ವಾಳ: ಕಾಂಗ್ರೆಸ್ ಬಡವರ ಪರವಾದ ಪಕ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಿಂದ ಬಡವರ ಏಳಿಗೆ ಸಾಧ್ಯವಾಗಿದೆ. ಈ ವಿಚಾರವನ್ನು ಕಾಂಗ್ರೆಸ್ ಕಾರ್ಯಕರ್ತರು ಜನತೆಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆ‌ರ್.ಹೇಳಿದರು.

ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಿಯೂಸ್ ಎಲ್.ರಾಡ್ರಿಗಸ್, ಎಂ.ಎಸ್ ಮಹಮ್ಮದ್, ಕೆಪಿಸಿಸಿಮಾಜಿ ಪ್ರಧಾನಕಾರ್ಯದರ್ಶಿ ಅಶ್ವನಿಕುಮಾರ್ ರೈ, ಬಂಟ್ವಾಳ ತಾ.ಪಂ.ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ರಾಜೀವ ಗಾಂಧಿ ಪಂಚಾಯತ್‌ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್‌ ಕುಮಾರ್ ಶೆಟ್ಟಿ. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *