ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಸಭಾಂಗಣದಲ್ಲಿ  ಭಾನುವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ
ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು.

ತಹಶೀಲ್ದಾರ್ ಅರ್ಚನಾ ಭಟ್ ಅವರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ   ಉದ್ಘಾಟಿಸಿ, ಮಹಾವೀರ ಜಯಂತಿಯ ಶುಭ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಜೈನ್ ಸಮಾಜದ ಪ್ರಮುಖರಾದ ಪಿ. ಜಿನರಾಜ ಅರಿಗ, ಸುದರ್ಶನ್ ಜೈನ್ ಪಂಜಿಕಲ್ಲು, ಸನ್ಮತಿ ಜಯಕೀರ್ತಿ, ಅಜಿತ್ ಕುಮಾರ್ ಜೈನ್, ಧನಂಜಯ ಜೈನ್, ಸಂತೋಷ್ ಕುಮಾರ್ ಜೈನ್ ಮುಂತಾದವರು ಉಪಸ್ಥಿತರಿದ್ದರು.
ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು. 

By Suddi9

Leave a Reply

Your email address will not be published. Required fields are marked *