ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್ ಹೃದಯಾಘಾತಕ್ಕೀಡಾಗಿ ಜು. ೫ರಂದು ಶುಕ್ರವಾರ ನಿಧನಹೊಂದಿದ್ದಾರೆ.

ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ಅವರು ಧರ್ಮಸ್ಥಳ ಮೇಳದಲ್ಲಿ ೫೦ವರ್ಷಗಳ ಸೇವೆ ಸಲ್ಲಿಸಿದ್ದಾರೆ. ತೆ೦ಕು ತಿಟ್ಟಿನ ಅಪ್ರತಿಮ ಸ್ತ್ರೀವೇಷಧಾರಿಯಾಗಿ ಕಲಾಸೇವೆ ಮಾಡಿದ್ದಾರೆ. ಇವರಿಗೆ ಹಲವಾರು ಸ೦ಘ-ಸ೦ಸ್ಥೆಗಳಿ೦ದ ಸನ್ಮಾನ ಹಾಗೂ ಪ್ರಶಸ್ತಿಗಳು ದೊರೆತಿವೆ.


ಇವರ ನಿಧನವು ಯಕ್ಷ ರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಇವರ ಅಗಲುವಿಕೆಗೆ ಅಭಿಮಾನಿಗಳ, ಯಕ್ಷಪ್ರಿಯರು, ಕುಟುಂಬಸ್ಥರು, ಬಂಧು ಬಳಗ ಶ್ಲೋಕವೈಕ್ತಪಡಿಸಿದ್ದಾರೆ. ಮೃತರು ಪತ್ನಿ ನಿವೃತ್ತ ಶಿಕ್ಷಕಿ ಸುಲೋಚನಾ, ಪುತ್ರರಾದ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

By suddi9

Leave a Reply

Your email address will not be published. Required fields are marked *