ಬಂಟ್ವಾಳ:ಇಲ್ಲಿನ ದಡ್ಡಲಕಾಡು ಸಕರ್ಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಮತ್ತು ದತ್ತು ಸ್ವೀಕರಿಸಿದ ಶ್ರೀ ದುರ್ಗ ಚಾರಿಟೇಬಲ್ ಟ್ರಸ್ಟ್ ಇದರ ಸುಳ್ಳು ಆರೋಪ ಮತ್ತು ಒತ್ತಡಕ್ಕೆ ಮಣಿದು ಮುಖ್ಯಶಿಕ್ಷಕ ರಮಾನಂದ ಇವರನ್ನು ಬೇರೆ ಶಾಲೆಗೆ ನಿಯೋಜನೆ ಮೂಲಕ ವರ್ಗವಣೆಗೊಳಿಸಿರುವುದನ್ನು ಖಂಡಿಸಿ ಅಲ್ಲಿನ ವಿದ್ಯಾರ್ಥಿಗಳು ಮತ್ತು ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ.

ಕಳೆದ ಒಂದೂವರೆ ತಿಂಗಳಿನಿಂದ ಶಾಲೆಯಲ್ಲಿ ಸರಿಯಾಗಿ ಪಾಠ ಪ್ರವಚನ ನಡೆಯದೆ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದು, ಶಾಲಾಭಿವೃದ್ಧಿ ಸಮಿತಿ ಮತ್ತು ದತ್ತು ಸ್ವೀಕರಿಸಿದ ಶ್ರೀ ದುರ್ಗ ಚಾರಿಟೇಬಲ್ ಟ್ರಸ್ಟ್ ಇದರ ಸುಳ್ಳು ಆರೋಪ ಮತ್ತು ರಾಜಕೀಯ ಪ್ರೇರಿತ ಒತ್ತಡಕ್ಕೆ ಮಣಿದು ಅಧಿಕಾರಿಗಳು ಮುಖ್ಯಶಿಕ್ಷಕರನ್ನು ಮತ್ತು ವಿದ್ಯಾರ್ಥಿಗಳನ್ನು ಬಲಿಪಶು ಮಾಡುತ್ತಿದ್ದಾರೆ.

ಶಾಲೆಯ ಆಡಳಿತದಲ್ಲಿ ಅನಗತ್ಯ ಹಸ್ತಕ್ಷೇಪ ನಡೆಸಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ದಕ್ಷ ಮುಖ್ಯಶಿಕ್ಷಕ ರಮಾನಂದ ಇವರನ್ನು ಮತ್ತೆ ದಡ್ಡಲಕಾಡು ಶಾಲೆಯಲ್ಲೇ ಮುಂದುವರಿಸಬೇಕು. ಪ್ರತೀ ವಿದ್ಯಾರ್ಥಿಗಳಿಂದ ತಲಾ ರೂ 3ಸಾವಿರ ಮೊತ್ತ ವಸೂಲಿ ಮಾಡುತ್ತಿರುವ ಅಕ್ರಮ ವ್ಯವಹಾರಗಳಿಗೆ ಕಡಿವಾಣ ಹಾಕಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.


ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಮುಖ್ಯಶಿಕ್ಷಕ ರಮಾನಂದ ಅವರ ಮನವಿ ಮೇರೆಗೆ ಅವರನ್ನು ಬೇರೆ ಶಾಲೆಗೆ ನಿಯೋಜನೆಗೊಳಿಸಲಾಗಿದೆ. ಅವರ ಮೇಲಿನ ಆರೋಪಗಳ ಬಗ್ಗೆ ಇಲಾಖಾ ತನಿಖೆ ನಡೆಯುತ್ತಿದ್ದು, ಈಗಾಗಲೇ ಜಿಲ್ಲಾ ಉಪನಿರ್ಶಧೆಶಕರು ಮತ್ತಿತರ ಅಧಿಕಾರಿಗಳ ತಂಡ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜು.18ರಂದು ಮತ್ತೆ ಶಾಲೆಯಲ್ಲಿ ಈ ಬಗ್ಗೆ ವಿದ್ಯಾರ್ಥಿಗಳು ಸಹಿತ ಪೋಷಕರ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಶಾಲಾಭಿವೃದ್ಧಿ ಸಮಿತಿ ಮತ್ತು ಟ್ರಸ್ಟಿನ ಕಿರುಕುಳದಿಂದ ಬೇಸತ್ತು ವಗರ್ಾವಣೆಗೆ ಬೇಡಿಕೆಯಿಟ್ಟಿದ್ದು, ಈಗಾಗಲೇ ಶಿಕ್ಷಕರ ಕೊರತೆಯಿಂದ ಕೆಲವೊಂದು ವಿದ್ಯಾರ್ಥಿಗಳು ಬೇರೆ ಶಾಲೆಗೆ ಸೇರ್ಪಡೆಗೊಂಡಿದ್ದಾರೆ ಎಂದು ಪ್ರತಿಭಟನಾಕಾರ ಸುಕುಮಾರ್ ಬಂಟ್ವಾಳ್ ಆರೋಪಿಸಿದರು.

ಪ್ರಾಥಮಿಕ ಶಾಲಾ ಸಹಶಿಕ್ಷಕಿ ಹಿಲ್ಡಾ ಫೆನಾರ್ಂಡಿಸ್ ಅವರಿಂದಲೇ ಈ ಎಲ್ಲಾ ಬೆಳವಣಿಗೆ ನಡೆದಿದ್ದು, ಕೂಡಲೇ ಅವರನ್ನು ವರ್ಗಾ ವಣೆಗೊಳಿಸಬೇಕು. ಶಾಲೆಗೆ ನೂತನ ಶಾಲಾಭಿವೃದ್ಧಿ ಸಮಿತಿ ರಚಿಸಿ, ಮುಖ್ಯಶಿಕ್ಷಕ ರಮಾನಂದ ಅವರನ್ನು ಮತ್ತೆ ಕರ್ತವ್ಯದಲ್ಲಿ ಮುಂದುವರೆಸಬೇಕು. ಇಲ್ಲದಿದ್ದಲ್ಲಿ ನಾಳೆಯಿಂದ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.


ಕುಸಿದು ಬಿದ್ದ ಬಿಇಒ:
ಈ ಪ್ರತಿಭಟನಾಕಾರರ ಆಕ್ರೋಶದ ಜೊತೆಗೆ ಪರಸ್ಪರ ಮಾತುಕತೆ ನಡೆಸುತ್ತಿದ್ದ ವೇಳೆ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಅಧಿಕ ರಕ್ತದೊತ್ತಡಕ್ಕೆ ಒಳಗಾಗಿ ಕುಸಿದು ಬಿದ್ದರು. ಕೂಡಲೇ ಇವರನ್ನು ಉಪಚರಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು.
ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ರಾಘವೇಂದ್ರ ಬಳ್ಳಾಲ್, ದೈಹಿಕ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್, ಶಿಕ್ಷಣ ಸಂಯೋಜಕಿ ಸುಜಾತ ಕುಮಾರಿ ಮತ್ತಿತರ ಅಧಿಕಾರಿಗಳು ಇದ್ದರು.

By Suddi9

Leave a Reply

Your email address will not be published. Required fields are marked *