ನವದೆಹಲಿ : ಸಿಬಿಐನ ನೂತನ ನಿರ್ದೇಶಕರಾಗಿ ಅನಿಲ್ ಕುಮಾರ್ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.

anil kumar sinha

ಅನಿಲ್ ಕುಮಾರ್ ಸಿನ್ಹಾರನ್ನು ಡಿ.2ರ ರಾತ್ರಿ ಕೇಂದ್ರ ಸರ್ಕಾರ ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಇವರು 1979ರ ಬಿಹಾರ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿರುವ ಸಿನ್ಹಾ, ಕೇಂದ್ರ ತನಿಖಾ ದಳದಲ್ಲಿ ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಸಮಿತಿ ಐಪಿಎಸ್ ಅಧಿಕಾರಿಗಳಾದ ಅನಿಲ್‌ಕುಮಾರ್ ಸಿನ್ಹಾ ಮತ್ತು ಶರತ್‌ಕುಮಾರ್ ಹೆಸರನ್ನು ಅಂತಿಮ ಪಡಿಸಿತ್ತು.

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜನ ಖರ್ಗೆ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರೂ ಪ್ರಧಾನಿ ಮೋದಿ ನೇತೃತ್ವದ ಸಮಿತಿಯಲ್ಲಿದ್ದರು. ಸುಮಾರು 40 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರುಗಳನ್ನು ಪರಿಶೀಲಿಸಲಾಗಿತ್ತು. ಅಂತಿಮವಾಗಿ ಅನಿಲ್ ಕುಮಾರ್ ಸಿನ್ಹಾ ಮತ್ತು ಹರ್ಯಾಣದ ಐಪಿಎಸ್ ಅಧಿಕಾರಿ ಶರತ್ ಕುಮಾರ್ ನಡುವೆ ಪೈಪೋಟಿ ಇತ್ತು.

By suddi9

Leave a Reply

Your email address will not be published. Required fields are marked *