ಬಂಟ್ವಾಳ : ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಮನೆ ಮತ್ತು ಶಾಲೆಯ ಮೂಲಕ ಉತ್ತಮ ಸಂಸ್ಕಾರ ಧೈರ್ಯದಿಂದ ಸವಾಲುಗಳನ್ನು ಎದುರಿಸುವ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದಾಗ ಅವರು ಭವಿಷ್ಯದಲ್ಲಿ ಸತ್ಪçಜೆಯಾಗಿ ರೂಪುಗೊಳ್ಳಲು ಸಾಧ್ಯವಿದೆ ಎಂದು ವಕೀಲೆ ಶೋಭಲತಾ ಸುವರ್ಣ ಹೇಳಿದ್ದಾರೆ.

ಇಲ್ಲಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಉಚಿತ ಕೊಡೆ ವಿತರಿಸಿ ಅವರು ಮಾತನಾಡಿದರು. ಗುರು ಹಿರಿಯರಿಗೆ ಗೌರವ ನೀಡುವುದರ ಜೊತೆಗೆ ಮಕ್ಕಳ ಪೋಷಕರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳ ಬಗ್ಗೆಯೂ ಮಕ್ಕಳಿಗೆ ತಿಳಿಸಬೇಕು ಎಂದರು.


ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶೈಲಜಾ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ಶುಭ ಹಾರೈಸಿದರು.
ದಾನಿ ಸುರೇಶ ಸಾಲ್ಯಾನ್, ಶಿಕ್ಷಕಿಯರಾದ ಭವಾನಿ ಮಹೇಶ್, ಪವಿತ್ರಾ ಸುಜನ್ ಮತ್ತಿತರರು ಇದ್ದರು. ಶಿಕ್ಷಕ ಶ್ರೀಪತಿ ಭಟ್ ಸ್ವಾಗತಿಸಿ, ಮುಖ್ಯಶಿಕ್ಷಕಿ ವಿನಿತಾ ವಂದಿಸಿದರು.

By Suddi9

Leave a Reply

Your email address will not be published. Required fields are marked *