ಬಂಟ್ವಾಳ ತಾಲ್ಲೂಕಿನ ಬಡಗಬೆಳ್ಳೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ‘ಮಕ್ಕಳ ಸುರಕ್ಷತಾ ಸಪ್ತಾಹ’ ಕಾರ್ಯಕ್ರಮ ಪ್ರಯುಕ್ತ ಗುರುವಾರ ಏರ್ಪಡಿಸಿದ್ದ ‘ಜಾಗೃತಿ ಜಾಥಾ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿದ್ಯಾರ್ಥೀನಿಯರು ಉತ್ಸಾಹದಿಂದ ಪಾಲ್ಗೊಂಡು ಹೆಣ್ಮಕ್ಕಳ ರಕ್ಷಣೆ ಬಗ್ಗೆ ಘೋಷಣೆ ಕೂಗಿದರು. ಶಿಕ್ಷಕಿ ಲಿಲ್ಲಿ ಮತ್ತು ಶಿಕ್ಷಕ ಕೇಶವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.


