ಬಿಜೆಪಿ ಸದಸ್ಯತ್ವ ಅಭಿಯಾನ ಶುರು ಮಾಡುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯರಾಗುವಂತೆ ಮನವಿ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕರೆ ನೀಡಿದರು. ಇದೀಗ ಈ ಅಭಿಯಾನಕ್ಕೆ ತುಳು ಚಿತ್ರರಂಗ ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರು ಕೂಡ ಈ ಅಭಿಯಾನಕ್ಕೆ ಬೆಂಬಲ ನೀಡಿ. ಬಿಜೆಪಿ ಸದಸ್ಯರಾಗಿದ್ದಾರೆ. ಇದೀಗ ಈ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಇದೀಗ ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ದೇವದಾಸ್ ಕಾಪಿಕಾಡ್ ಕಾರ್ಯಕ್ರಮ ಬಹಿಷ್ಕಾರ ಮಾಡಲಾಗಿದೆ ಎಂದು ಹೇಳಲಾಗಿದೆ. ಬಿಜೆಪಿ ‘ಸದಸ್ಯತ್ವ’ ವಿವಾದಕ್ಕೆ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ಈ ಬಿಜೆಪಿ ‘ಸದಸ್ಯತ್ವ’ದಿಂದ ಈ ಬಹಿಷ್ಕಾರದ ಬಿಸಿ ತಟ್ಟಿದೆ ಎಂದು ಹೇಳಲಾಗಿದೆ.

ಸೌದಿ ಅರೇಬಿಯಾದಲ್ಲಿ ತುಳು ನಟನ ಕಾಮಿಡಿ ಶೋಗೆ ಬಹಿಷ್ಕಾರ ಮಾಡುವುದಾಗಿ ಅಲ್ಲಿನ ಕೆಲವರು ಹೇಳಿದ್ದಾರೆ. ಇನ್ನು ಈ ಬಗ್ಗೆ ಪೋಸ್ಟ್​​ ಒಂದು ಕೂಡ ವೈರಲ್​​ ಆಗುತ್ತಿದೆ. ಬುಧವಾರ ಮಾಜಿ ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡ ಸಮ್ಮುಖದಲ್ಲಿ ಸದಸ್ಯತ್ವ ಪಡೆದಿದ್ದಾರೆ.

ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಕಾಪಿಕಾಡ್ ಆನ್ ಲೈನ್ ಸದಸ್ಯತ್ವ ಪಡೆದಿದ್ದಾರೆ ಎಂದು ಹೇಳಲಾಗಿದೆ. ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದ ಬಗ್ಗೆ ಬಿಜೆಪಿಯಿಂದ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಹಂಚಿಕೊಳ್ಳಲಾಗಿದೆ. ಡಿ.ವಿ.ಸದಾನಂದ ಗೌಡ ಅಧಿಕೃತ ಫೇಸ್ಬುಕ್ ಖಾತೆ, ರಾಜ್ಯ ಮತ್ತು ದ.ಕ ಜಿಲ್ಲಾ ಬಿಜೆಪಿ ಫೇಸ್ಬುಕ್​​ನಲ್ಲೂ ಪೋಸ್ಟ್ ಮಾಡಲಾಗಿದೆ.

ಸೆ.13 ಹಾಗೂ 14 ರಂದು ಸೌದಿಯಲ್ಲಿ ಕಾಪಿಕಾಡ್ ಶೋ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸೌದಿಯ ಜುಬೈಲ್ ನ ಪುಲಿ ರೆಸ್ಟೋರೆಂಟ್ ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇನ್ನು ಈ ಪೋಸ್ಟರ್​​​ ವೈರಲ್​ ಆಗುತ್ತಿದ್ದಂತೆ ಕಾಪಿಕಾಡ್​​ ಅವರು ಉಲ್ಟಾ ಹೊಡೆದಿದ್ದಾರೆ. ತಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ್ದಾರೆ.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ಆಡಿಯೋವೊಂದು ಹಾಕಿದ್ದಾರೆ. ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ. ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ. ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ ಎಂಬ ಸ್ಪಷ್ಟನೆ ನೀಡಿದ್ದಾರೆ.

By Suddi9

Leave a Reply

Your email address will not be published. Required fields are marked *