ಕಂಕನಾಡಿ: ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ ನಿವಾಸಿ ಅಬುತಾಹಿರ್ ಅಲಿಯಾಸ್ ಅನ್ವರ್ (25) ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದನ್ನು ನಗರದ ಪೊಲೀಸರು ಪತ್ತೆ ಮಾಡಿದ್ದಾರೆ. ಇದೀಗ ಈ ಕಾರ್ಯಚರಣೆಯನ್ನು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಯಶಸ್ವಿಯಾಗಿಸಿದ್ದಾರೆ. ಇದೀಗ ಅಬುತಾಹಿರ್ ಅಲಿಯಾಸ್ ಅನ್ವರ್​​ನ್ನು ಪೊಲೀಸರು ಬಂಧಿಸಿದ್ದಾರೆ.

1 ಲಕ್ಷ ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್​ನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಸುಮಾರು 1.75 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಂಕನಾಡಿ ನಗರ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಪ್ರದೇಶದಲ್ಲಿ ಅಕ್ರಮವಾಗಿ ದ್ವಿಚಕ್ರ ವಾಹನದಲ್ಲಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಎಂದು ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ. ಈ ವೇಳೆ ಅನ್ವರ್ ಸಿಕ್ಕಿಬಿದಿದ್ದಾನೆ. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಹಾಗೂ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ ಐ ನರೇಂದ್ರ, ಎಎಸ್ ಐ ಮೋಹನ್ ಕೆವಿ, ಅಧಿಕಾರಿಗಳಾದ ರಾಮ್ ಪೂಜಾರಿ, ಸುಜನ್ ಶೆಟ್ಟಿ, ಸಿಸಿಬಿ ಸಿಬ್ಬಂದಿಗಳು ಈ ದಾಳಿ ನಡೆಸಿದ್ದಾರೆ.

By suddi9

Leave a Reply

Your email address will not be published. Required fields are marked *