ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆಯು ಕಡಬದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ.

ಮೃತ ವ್ಯಕ್ತಿಯು ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ವೇಳೆಯಲ್ಲಿ ಕಾರು ಢಿಕ್ಕಿ ಹೊಡೆದು ಈ ಘಟನೆಯು ಸಂಭವಿಸಿದೆ ಎನ್ನಲಾಗಿದೆ. ಈ ಅಪಘಾತದ ದೃಶ್ಯವೊಂದು ಸ್ಥಳೀಯ ಇಂಡಸ್ಟ್ರೀಸ್ ವೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ

By suddi9

Leave a Reply

Your email address will not be published. Required fields are marked *