ಧರ್ಮ ದ್ವೇಷದ ಭಾಷಣ ಆರೋಪದಡಿ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶ ಕಾರ್ಯಕ್ರಮದಲ್ಲಿ ಅರುಣ್ ಉಳ್ಳಾಲ್ ಧರ್ಮ ದ್ವೇಷದ ಭಾಷಣ ಭಾಷಣ ಮಾಡಿದ್ದರು. ಹಿಂದೂಗಳು ಹಿಂದೂ ಮಾಲೀಕತ್ವದ ಸಭಾಂಗಣದಲ್ಲೇ ಮದುವೆ ಆಗಬೇಕು, ಹಿಂದೂ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಅರುಣ್ ಉಳ್ಳಾಲ್ ಹೇಳಿದ್ದರು.

ಭಾಷಣದ ವಿಡಿಯೋ ವೈರಲ್ ಬೆನ್ನಲ್ಲೇ ಸಾಮಾಜಿಕ ತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಡಾ.ಅರುಣ್ ಉಳ್ಳಾಲ್ ವಿರುದ್ಧ ಮಂಗಳೂರು ಸೆನ್ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಧರ್ಮ ದ್ವೇಷದ ಭಾಷಣ ಮಾಡಿದ ಅರೋಪದಡಿ ಡಾ. ಅರುಣ್ ಉಳ್ಳಾಲ್ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 66(C) IT ACT AND 196, 351 (BNS), 2023 ರಂತೆ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *