ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ಸಹಕಾರಿ ಪ್ರಕೋಷ್ಟದ ಸಭೆಯು ಮಂಡಲದ ಸಹಕಾರಿ ಪ್ರಕೋಷ್ಟದ ಸಂಚಾಲಕರಾದ   ಜಯರಾಮ್ ಶೆಟ್ಟಿ ಬೋಳಂತೂರು  ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಪ್ರಕೋಷ್ಟದ ಸಂಚಾಲಕರಾದ ಟಿ.ಜಿ. ರಾಜಾರಾಮ್ ಭಟ್ ಸಹಕಾರಿ ಪ್ರಕೋಷ್ಟದ ಜವಾಬ್ದಾರಿ ಮತ್ತು ಕರ್ತವ್ಯವನ್ನು ಹೇಗೆ ನಿಭಾಯಿಸಬೇಕೆಂಬ ಕುರಿತು ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ .ಚೆನ್ನಪ್ಪ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಪ್ರಕೋಷ್ಟದ ಸದಸ್ಯರಾದ ರವೀಂದ್ರ ಕಂಬಳಿ, ಜಯಶಂಕರ ಬಾಸ್ರಿತ್ತಾಯ, ಶಿವಪ್ಪ ಗೌಡ ನಿನ್ನಿಕಲ್ಲು, ನಾರಾಯಣ ಶೆಟ್ಟಿ ಕುಲ್ಯಾರ್ ಉಪಸ್ಥಿತರಿದ್ದರು.
ಪ್ರಕೋಷ್ಟದ ಸಹ ಸಂಚಾಲಕರಾದ ಪದ್ಮನಾಭ ದೇವಾಡಿಗ ವಂದಿಸಿದರು. 

By suddi9

Leave a Reply

Your email address will not be published. Required fields are marked *