
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವು ಸಕಾಲ ಯೋಜನೆಗಳನ್ನು ಗ್ರಾಮೀಣ ಪ್ರದೇಶಗಳಿಗೆ ನೀಡುತ್ತಿದೆ. ಬಂಟ್ವಾಳ ವ್ಯಾಪ್ತಿಯಲ್ಲಿ ಹೆಚ್ಚಿನ ಕಾರ್ಯಯೋಜನೆಗಳನ್ನು ಹಾಕಿಕೊಂಡು ಶಾಲೆ, ಬಡವರಿಗೆ ಬೇಕಾದ ಮೂಲಸೌಕರ್ಯಗಳನ್ನು ನೀಡುತ್ತಿದೆ. ಈ ಬಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಿದ್ದಕಟ್ಟೆ ಸರಕಾರಿ ಪ್ರೌಢ ಶಾಲೆಯ ನೂತನ ಭೋಜನಾಲಯ ಮತ್ತು ರಂಗಮಂದಿರದ ಕಾಮಗಾರಿಗೆ 2 ಲಕ್ಷ.ರೂ. ಮಂಜೂರಾತಿ ಪತ್ರವನ್ನು ಶಾಲಾಭಿವೃದ್ಧಿ ಸಮಿತಿಗೆ ಹಸ್ತಾಂತರಿಸಿದೆ.
ಈ ಹಣದ ಮೂಲಕ ಶಾಲೆಯಲ್ಲಿ ನೂತನ ಭೋಜನಾಲಯ ಹಾಗೂ ರಂಗಮಂದಿರದ ಕಾಮಗಾರಿ ಆಗಲಿದೆ ಎಂದು ಹೇಳಲಾಗಿದೆ. ಇನ್ನು ಈ ಪತ್ರವನ್ನು ನೀಡುವ ಸಂದರ್ಭದಲ್ಲಿ ಜನ ಜಾಗೃತಿ ವೇದಿಕೆಯ ಸದಸ್ಯರಾದ ಅರ್ಕಕೀರ್ತಿಇಂದ್ರ ಜೈನ್, ಗ್ರಾಮಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ, ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಉಮೇಶ್ ಗೌಡ, ಗ್ರಾಮಾಭಿವೃದ್ಧಿ ಯೋಜನೆಯ ಸಿದ್ದಕಟ್ಟೆ ವಲಯ ಮೇಲ್ವಿಚಾರಕಾರಕ ಬಾಬು.ಕೆ, ಒಕ್ಕೂಟಗಳ ವಲಯ ಅಧ್ಯಕ್ಷರಾದ ಸುರೇಶ್ ಅಂಚನ್, ಉಪ ಪ್ರಾಂಶುಪಾಲರಾದ ಲೋನೋ ಲೋಬೊ, ನಿವೃತ ಶಿಕ್ಷಕ ರಾಜಕುಮಾರ್ , ಶಿಕ್ಷಕ ಉಮೇಶ್ ಉಪಸ್ಥಿತರಿದ್ದರು.
