ಮಂಗಳೂರು : ಖ್ಯಾತ ಸಾಂಸ್ಕೃ ತಿಕ ಸಂಘಟಕ ಮತ್ತು ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ (೬೨.) ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ನ.10ರಂದು ಮಧ್ಯಾಹ್ನ ಕೊನೆಯುಸಿರೆಳೆದರು.

ಬೋನಿಫಾಸ್ ಪಿಂಟೋ ಅವರು ತಮ್ಮ ವೃತ್ತಿಜೀವನದ ಅವಧಿಯಲ್ಲಿ ೨೮ ವರ್ಷಗಳ ಕಾಲ ಕೆಎನ್‌ಎಸ್‌ಗೆ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ಸಂಘಟನಾ ಚಾತುರ್ಯತೆ, ಸಮಯಪ್ರಜ್ಞೆ ಮತ್ತು ಸರಳ ಸ್ವಭಾವದಿಂದಾಗಿ ಜನರ ಮನ್ನಣೆ ಗಳಿಸಿದ್ದರು. ಸ್ಪರ್ಧೆಗಳ ಆಯೋಜನೆ, ರಂಗಭೂಮಿ ವಿನ್ಯಾಸ ಮತ್ತು ರಂಗಭೂಮಿಯ ವಸ್ತçವಿನ್ಯಾಸ ಹಾಗೂ ನಿರ್ವಹಣೆಯಲ್ಲಿ ವಿಶೇಷ ಪರಿಣಿತಿ ಹೊಂದಿದವರಾಗಿದ್ದರು.

ಮೃತರು ರೀಟಾ ಪಿಂಟೋ ಮತ್ತು ದಿವಂಗತ ಸಿಪ್ರಿಯನ್ ಪಿಂಟೋ ಅವರು ಪುತ್ರರಾಗಿದ್ದು, ಜಿನ್ನಾ, ಲೋನಾ, ಡಯಾನಾ, ಆಶಾ ಅವರ ಸಹೋದರಿಯರನ್ನು ಅಗಲಿದ್ದಾರೆ.

By suddi9

Leave a Reply

Your email address will not be published. Required fields are marked *