ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ಆದರೆ ಇದೀಗ ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಲ್ಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಲಾಗಿದೆ.

ಹೌದು, ಮಂಗಳೂರಿನ ವಿಮಾನ ನಿಲ್ದಾಣಕ್ಕೂ ಇದೇ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ನ.30ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್‌ ಎನ್ನುವ ಹೆಸರಲ್ಲಿದ್ದ ಇಮೇಲ್‌ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜಪೆ ಠಾಣೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ದೂರು ನೀಡಿದ್ದಾರೆ.

ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಪತ್ನಿ, ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್‌ಎಲ್‌ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಇಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ವಿಚಾರ ಇರುವುದರಿಂದ ಅಲ್ಲಿನವರೇ ಈ ಕೃತ್ಯ ನಡೆಸಿರುವ ಸಾಧ್ಯತೆಯನ್ನು ಪೊಲೀಸರು ಶಂಕಿಸಿದ್ದು, ಸದ್ಯಕ್ಕೆ ತನಿಖೆ ನಡೆಯುತ್ತಿದೆ.

By suddi9

Leave a Reply

Your email address will not be published. Required fields are marked *