ಮೂಡುಬಿದರೆ: ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ವ್ಯಕ್ತಿಯೊಬ್ಬರ ಮನೆ ಹತ್ತಿರದಲ್ಲಿ ನಡೆಯುತ್ತಿರುವ ಶೇಂದಿ ವ್ಯಾಪಾರವನ್ನು ತೆರವುಗೊಳಿಸುವಂತೆ ಮಂಗಳೂರು ಸಹಾಯಕ ಆಯುಕ್ತ ಮೂಡುಬಿದಿರೆ ತಹಶೀಲ್ದಾರ್ ಅವರಿಗೆ ಆದೇಶ ನೀಡಿದ್ದಾರೆ.
ಸಂಪಿಗೆಯ ರಸ್ತೆ ಬದಿಯಲ್ಲಿರುವ ಎಸ್.ರಾಮ ಅವರ ಮನೆ ಹತ್ತಿರದಲ್ಲೆ ಹಲವು ಸಮಯಗಳಿಂದ ಶೇಂದಿ ವ್ಯಾಪಾರ ನಡೆಯುತ್ತಿದ್ದು ಇದರಿಂದ ಸಮಸ್ಯೆ ಆಗುತ್ತಿದೆ ಎಂದು ದೂರು ನೀಡಲಾಗಿದೆ. ಈ ಬಗ್ಗೆ ಸಹಾಯಕ ಆಯುಕ್ತರು ಈಚೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಇದರ ವ್ಯಾಪಾರ ಪರವಾನಿಗೆ ಕೂಡ ನವೀಕರಣಗೊಂಡಿಲ್ಲ ಎಂದು ತಿಳಿದುಬಂದಿದೆ ಎನ್ನಲಾಗಿದೆ. ಸದ್ರಿ ಅಂಗಡಿಯನ್ನು ತೆರವುಗೊಳಿಸುವಂತೆ ಸಹಾಯಕ ಆಯುಕ್ತರು ಇತ್ತೀಚೆಗೆ ಮೂಡುಬಿದರೆ ತಹಸೀಲ್ದಾರ್ ಅವರಿಗೆ ಆದೇಶ ನೀಡಿದ್ದಾರೆ.
