ಓಂಶಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ ಹೊಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ಸಂಭವಿಸಿದೆ. ಘಟನೆ ವೇಳೆ ಶಾಸಕ ಕೆಸಿ ವೀರೇಂದ್ರ, ಚಾಲಕ ಸೇರಿ ಮೂವರು ಕಾರಿನಲ್ಲಿದ್ದರು.

ಬೇಗೂರು ಗ್ರಾಮದ ಬಿಂದು, ರಂಗಮ್ಮ ಗಂಭೀರ ಗಾಯಗೊಂಡವರಾಗಿದ್ದು, ಸದ್ಯ ಅವರಿಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕರ ಕಾರು ಚಿತ್ರದುರ್ಗದಿಂದ ಬೆಂಗಳೂರಿಗೆ ಬರುವ ವೇಳೆ ನಡೆದ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *