ಬಂಟ್ವಾಳ:  ಮತದಾನ ಪ್ರತಿಯೊಬ್ಬರ ಆದ್ಯಕರ್ತವ್ಯ. ದೇಶದ ಪ್ರಗತಿಗೆ ಇದು ಅತ್ಯಂತ ಅಗತ್ಯವಾದುದು. ಇಂದಿನ ಯುವಜನತೆ ತಮಗಿರುವ ಮತದಾನವೆಂಬ ಹಕ್ಕು ಮತ್ತು ಕರ್ತವ್ಯವನ್ನು ಪಾಲಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಯೋಗ ವರ್ಧನ್ ಡಿ.ಎಮ್.ರವರು ಕರೆ ನೀಡಿದರು. 

 ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಚುನಾವಣಾ ಸಾಕ್ಷರತಾ ಕ್ಲಬ್‌ನ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ತಮದಲ್ಲಿ ಭಾಗವಹಿಸಿ‌ ಅವರು ಮಾತನಾಡಿದರು.

 ಇದೇ ವೇಳೆ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಹೆಚ್.ವಿ. ಸ್ವಾಗತಿಸಿ ಇ.ಎಲ್.ಸಿ. ಸಂಯೋಜಕರಾದ ಡಾ.ವಿನಾಯಕ ಕೆ.ಎಸ್. ವಂದಿಸಿದರು. 

By suddi9

Leave a Reply

Your email address will not be published. Required fields are marked *