ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್​ಟಿಐ ಕಾರ್ಯಕರ್ತ ಗಂಗರಾಜು ಫೋಟೋಗೆ ಹಚ್ಚಿರುವ ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ. ಸರಣಿ ಪ್ರಾಣಿ ಬಲಿ ಮಾಡಿರುವ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜುಗೆ ಶಕ್ತಿ ತುಂಬಲು ಈ ರೀತಿ ಮಾಡುತ್ತಿದ್ದರು ಎನ್ನಲಾಗಿದೆ.ಮಸಾಜ್ ಪರ್ಲಾರ್ ಗಲಾಟೆಯಲ್ಲಿ ಬಂಧನವಾಗಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ಪರಿಶೀಲಿಸಿದಾಗ ​ಸ್ಫೋಟಕ ಅಂಶ ಪೊಲೀಸರ ಮುಂದೆ ಹೇಳಿದ್ದಾರೆ.

ಈ ವಿಚಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೊಲೀಸ್​ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಣತಿಯಂತೆ ಕದ್ರಿ ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್ ದೂರು ನೀಡಿದ್ದು, ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಮದ್ಯರಾತ್ರಿ 1.30ಕ್ಕೆ ಎಫ್​ಐಆರ್​ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *