ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸಾವನ್ನಪ್ಪಿದೆ. ಥನವ್ ರೆಡ್ಡಿ ಮೃತ ಮಗು ಎಂದು ಹೇಳಲಾಗಿದೆ. ಜೆಸಿಬಿ ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮಹದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಜೆಸಿಬಿ ಚಾಲಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಮನೆ ಮುಂದೆ ಥನವ್ ರೆಡ್ಡಿ ಆಟವಾಡುತ್ತಿದ್ದ. ಈ ವೇಳೆ ಆತನ ಮೇಲೆ ಜೆಸಿಬಿ ಹರಿದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮಗುವನ್ನು ವೈದೇಹಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಹೋಗಿದ್ದು, ಆದರೆ ಮಾರ್ಗಮಧ್ಯೆಯೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ವೈದೇಹಿ ಆಸ್ಪತ್ರೆಯಲ್ಲಿ ಥನವ್ ರೆಡ್ಡಿ(2) ಮರಣೋತ್ತರ ಪರೀಕ್ಷೆ ಮಾಡಲಾಗಿದೆ.

By suddi9

Leave a Reply

Your email address will not be published. Required fields are marked *