ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51 ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟದೆ, ಈ ಕಾರಣಕ್ಕಾಗಿ ಇನ್ನು ಮುಂದೆ ರಾಜ್ಯದ ಎಲ್ಲ ಕಡೆ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತದೆ ಎಂದು ಹೇಳಿದ್ದಾರೆ.

ಹೋಟೆಲ್​, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಇನ್ಮುಂದೆ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು ಎಂದು ಗುಂಡೂರಾವ್ ಹೇಳಿದ್ದಾರೆ.

By suddi9

Leave a Reply

Your email address will not be published. Required fields are marked *