ಮಂಗಳೂರು: ಮಂಗಳೂರಿನ ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್(40) ಎಂದು ಗುರುತಿಸಲಾಗಿದೆ. ಅಭಿಷೇಕ್ ಸಿಂಗ್ ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಸಿಐಎಸ್ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್, ಕೆಲವು ದಿನಗಳ ಹಿಂದೆ ಸಹೋದ್ಯೋಗಿಗಳೊಂದಿಗೆ ವಸ್ತುಪ್ರದರ್ಶನವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಬಂದಿದ್ದರು. ಅವರು ನಗರದ ರಾವ್ ಮತ್ತು ರಾವ್ ವೃತ್ತದ ಬಳಿ ಇರುವ ಲಾಡ್ಜ್‌ವೊಂದರಲ್ಲಿ ತಂಗಿದ್ದರು. ಈಗ ಅದೇ ಲಾಡ್ಜ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಸಾವಿಗೂ ಮುನ್ನ ವಿಡಿಯೋ ಪೋಸ್ಟ್ ಮಾಡಿರುವ ಅಭಿಷೇಕ್, ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ತನ್ನೊಂದಿಗೆ ಸಂಬಂಧ ಬೆಳೆಸಿದ್ದರು ಎಂದು ಅಭಿಷೇಕ್ ಸಿಂಗ್ ವಿಡಿಯೋದಲ್ಲಿ ಆರೋಪಿಸಿದ್ದು, ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *