ಇಡ್ಲಿ, ಕಲ್ಲಂಗಡಿ, ಎಲ್ಲವೂ ಆಗಿತ್ತು. ಇದೀಗ ಬೆಲ್ಲ ಕೂಡ ಆರೋಗ್ಯ ಹಾನಿಕರಕ ಎಂದು ಹೇಳಲಾಗಿದೆ. ಬೆಲ್ಲದಲ್ಲಿ ಕೂಡ ಅಪಾಯಕಾರಿ ರಾಸಾಯನಿಕ ಬಳಸುತ್ತಿರುವುದು ದೃಢಪಟ್ಟಿದೆ.ಬೆಲ್ಲ ಗೋಲ್ಡನ್ ಕಲರ್​ನಲ್ಲಿ ಕಾಣಿಸುವ ಮೂಲಕ ಜನರನ್ನು ಸೆಳೆಯುವಂತೆ ಮಾಡಲು ಕೃತಕ ಬಣ್ಣ ಬೆರೆಸಲಾಗುತ್ತಿದೆ ಗೋಲ್ಡನ್​ ಕಲರ್​​ನಲ್ಲಿ ಕಾಣಿಸುವ ಬೆಲ್ಲದತ್ತ ಜನ ಆಕರ್ಷಿತರಾಗುತ್ತಾರೆ. ಆದರೆ ರಾಸಾಯನಿಕ ಬೆಲ್ಲ ಆರೋಗ್ಯದ ಮೇಲೆ ಅಡ್ಡ ಪರಿಣಾಮಕ್ಕೆ ಕಾರಣವಾಗಿದೆ ಎಂದು ಆಹಾರ ಇಲಾಖೆ ಮೂಲಗಳು ತಿಳಿಸಿವೆ.

ಕರ್ನಾಟಕದ ವಿವಿಧ ಕಡೆಗಳಲ್ಲಿ ಆಹಾರ ಇಲಾಖೆ ಬೆಲ್ಲದ ಮಾದರಿಗಳನ್ನು ಸಂಗ್ರಹ ಮಾಡಿತ್ತು. ಆ ಸ್ಯಾಂಪಲ್ಸ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಯಾಲಾಗಿದೆ. ಸ್ಯಾಂಪಲ್​ಗಳಲ್ಲಿ ಕಲರ್ ಏಜೆಂಟ್ ಹಾಗೂ ಸಲ್ಫರ್ ಡೈಆಕ್ಸೈಡ್ ದೃಢಪಟ್ಟಿವೆ.

By suddi9

Leave a Reply

Your email address will not be published. Required fields are marked *