ಬೆಳಗಾವಿಯ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಮಕ್ಕಳಿರುವ ವ್ಯಕ್ತಿಯೋರ್ವ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿದ್ದಾನೆ. ಇದೀಗ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಬಾಣಂತಿಯಾದ ವಿಚಾರ ಗೊತ್ತಾಗುತ್ತಿದ್ದಂತೆ ಪೋಷಕರು ದೂರು ನೀಡಿದ್ದು, ಈ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಪ್ರಕರಣದಡಿಯಲ್ಲಿ ಆರೋಪಿ ಬಸಪ್ಪ ಅಡಿವೆಪ್ಪ ಹಳ್ಳೂರ್(32) ಎನ್ನುವಾತನನ್ನು ಬಂಧಿಸಿದ್ದಾರೆ.

ಟ್ರ್ಯಾಕ್ಟರ್ ಡ್ರೈವರ್ ಆಗಿರುವ ಬಸಪ್ಪ ಅಡಿವೆಪ್ಪ ಹಳ್ಳೂರ ಎಂಬಾತನಿಗೆ ಈಗಾಗಲೇ ಮದುವೆಯಾಗಿ ಎರಡು ಮಕ್ಕಳು ಸಹ ಇವೆ. ಆದರೂ ಸಹ ಬಸಪ್ಪ ಅಪ್ರಾಪ್ತೆ ಬಾಲಕಿಯನ್ನು ಪುಸಲಾಯಿಸಿ ಆಕೆಯೊಂದಿಗೆ ನಿರಂತರವಾಗಿ ದೈಹಿಕ ಸಂಪರ್ಕ ಬೆಳಸಿದ್ದಾನೆ. ಪರಿಣಾಮ ಬಾಲಕಿ ಇದೀಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.

By suddi9

Leave a Reply

Your email address will not be published. Required fields are marked *