ನೂತನ ಸಮುದಾಯ ಭವನ ಉದ್ಘಾಟನಾ ಸಮಾರಂಭ | ಸನ್ಮಾನ

ಕೈಕಂಬ : ಬಿಲ್ಲವ ಸಮಾಜ ಸೇವಾ ಸಂಘ(ರಿ) ಗುರುನಗರ ಗುರುಪುರ ಇದರ ನೂತನ ಸಮುದಾಯ ಭವನ ಉದ್ಘಾಟನಾ ಸಮಾರಂಭ ಮೇ. ೪ರಂದು ಸಂಘದ ವಠಾರದಲ್ಲಿ ನಡೆಯಲಿದೆ.ಮೇ. ೩ರಂದು ರಾತ್ರಿ ವಾಸ್ತು ರಕ್ನೋಘ್ನ, ವಾಸ್ತು ಪೂಜೆ, ವಾಸ್ತು ಬಲಿ ಮತ್ತಿತರ ವೈದಿಕ ಕಾರ್ಯಕ್ರಮ ನಡೆಯಲಿದೆ. ಮೇ. ೪ರಂದು ಬೆಳಿಗ್ಗೆ ೮ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ನವಕ ಕಲಶಾಭಿಷೇಕ, ಗುರುಪಾದ ಪೂಜೆ ಹಾಗೂ ೧೧ ಗಂಟೆಗೆ ನೂತನ ಸಮುದಾಯ ಭವನ ಉದ್ಘಾಟನೆ ಹಾಗೂ ಸಭಾ ಕಾರ್ಯಕ್ರಮ ಜರಗಲಿದೆ.

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸಮುದಾಯ ಭವನ ಉದ್ಘಾಟಿಸಲಿದ್ದಾರೆ. ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವಗಿರಿ ಮಠದ ಶ್ರೀ ವಿಶುದ್ಧಾನಂದ ಸ್ವಾಮೀಜಿ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಾಜಿ ಸಚಿವ ಜನಾರ್ದನ ಪೂಜಾರಿ ಸಹಿತ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ ೧೨:೩೦ರಿಂದ ಅನ್ನಸಂತರ್ಪಣೆ, ೨ರಿಂದ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ ೪:೪೦ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ. ಸೋಲೂರು ಮಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ನಾರಾಯಣ ಗುರು ವಿಚಾರ ವೇದಿಕೆ ಕರ್ನಾಟಕದ ರಾಜ್ಯಾಧ್ಯಕ್ಷ ಸತ್ಯಜೀತ್ ಸುರತ್ಕಲ್, ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಯೋಗೀಶ್ ಕೈರೋಡಿ, ನಟ ಡಾ. ಸುಮನ್ ತಲ್ವಾರ್, ರಾಜಶೇಖರ ಕೋಟ್ಯಾನ್, ಸೂರ್ಯಕಾಂತ್ ಜೆ. ಸುವರ್ಣ, ಸಾಯಿ ರಾಮ್, ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಗೋಳಿದಡಿಗುತ್ತು, ಪದ್ಮನಾಭ ಕೋಟ್ಯಾನ್(ಬಿಎಲ್‌ಪಿ), ಪ್ರಭೋದ್‌ಚಂದ್ರ ದೊಡ್ಡಮನೆ ಹೆಜಮಾಡಿ ಮತ್ತಿತರ ಗಣ್ಯಾತಿಗಣ್ಯರು ಭಾವಹಿಸಲಿದ್ದಾರೆ.

ಸಮಾರಂಭದಲ್ಲಿ ಬಹುಭಾಷಾ ನಟ ಡಾ. ಸುಮನ್ ತಲ್ವಾರ್ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಏರ್ಪಡಿಸಲಾಗಿದೆ. ಸಂಘದ ಮಾಜಿ ಅಧ್ಯಕ್ಷರುಗಳು ಹಾಗೂ ಮಾಜಿ ಅಧ್ಯಕ್ಷ ದಿ. ಸುಧಾಕರ ಇವರ ಪತ್ನಿಗೆ ಗೌರವ ಸಮರ್ಪಿಸಲಾಗುವುದು. ಸಂಜೆ ೭ರಿಂದ ಶಾರದಾ ಆರ್ಟ್ಸ್ ಕಲಾವಿದರು(ರಿ) ಮಂಜೇಶ್ವರ ಇವರಿಂದ `ಕಥೆ ಎಡ್ಡೆಂಡು’ ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಗುರುಪುರ ಬಿಲ್ಲವ ಸಂಘದ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *