ಬಂಟ್ವಾಳ:  ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಂಟ್ವಾಳ ತಾಲೂಕಿನ ರಾಯಿ ಗ್ರಾಮಪಂಚಾಯತ್ ಕಚೇರಿ ಮುಂಭಾಗ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.


ಪ್ರತಿಭಟನಾಕರರನ್ನದ್ದೇಶಿಸಿ ಮಾತನಾಡಿದ ಶಾಸಕರು ಗ್ಯಾರಂಟಿ ಹೆಸರಿನಲ್ಲಿ‌ ಅಧಿಕಾರಕ್ಕೆ ಬಂದ ಕರ್ನಾಟಕದ ಕಾಂಗ್ರೆಸ್ ಸರಕಾರ ಎಲ್ಲದಕ್ಕು ತೆರಿಗೆ ಹೆಚ್ಚಿಸುವ ಮೂಲಕ ಜನರ ಮೇಲೆ ಹೊರೆಯನ್ನು ಹೊರಿಸಿ,ಇನ್ನೊಂದು ಕೈಯಿಂದ ಕಿತ್ತುಕೊಳ್ಳುತ್ತಿದೆ. ಇದೀಗ ಜನಸಾಮಾನ್ಯರ ಅನುಕೂಲಕ್ಕಾಗಿ ಜಾರಿಗೊಳಿಸಿದ ವಿವಿಧ ಸವಲತ್ತುಗಳಿಂದ ಕಡಿತಗೊಳಿಸಲು ಮುಂದಾಗಿದೆ ಎಂದು ಆರೋಪಿಸಿದರು.


ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು,ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುತ್ತಿಲ್ಲ,ದಿನಬಳಕೆ ವಸ್ತುಗಳ ಬೆಲೆ  ಏರಿಕೆಯಾದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.ಒಟ್ಟಾರೆಯಾಗಿ‌ ರಾಜ್ಯದಲ್ಲಿ ಸರಕಾರ ಇದೆಯಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೇವದಾಸ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿದರು‌.  ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ರಾಯಿಬೆಟ್ಟು, ಉಪಾಧ್ಯಕ್ಷೆ  ಗುಣವತಿ ಪೂಜಾರಿ,ಬಂಟ್ವಾಳ ಬಿಜೆಪಿ ಮಂಡಲದ ಮಾಜಿ ಕಾರ್ಯದರ್ಶಿ ರಮಾನಾಥ ರಾಯಿ,ರಾಯಿ-ಕೊಯಿಲ ಧಮೋಧ್ಧಾನ ಪ್ರತಿಷ್ಠಾನ ವೇದಿಕೆ  ಅಧ್ಯಕ್ಷರಾದ ದುರ್ಗಾದಾಸ್ ಶೆಟ್ಟಿ ಮಾವಂತೂರು, ದ.ಕ ಬಿಜೆಪಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಸಹಸಂಚಾಲಕ ಹರೀಶ್ ರಾಯಿ, ಬಂಟ್ವಾಳ ಬಿಜೆಪಿ ಮಂಡಲದ ಪ್ರಕೋಷ್ಠಗಳ ಸಂಚಾಲಕಾರದ ಚಂದ್ರಶೇಖರ ಗೌಡ ಕಾರಂಬಡೆ,ಪಕ್ಷದ ಸ್ಥಳೀಯ ಪ್ರಮುಖರಾದ ಸಂತೋಷ್ ಅಂಚನ್, ಆನಂದ ಬುರಾಲ್, ಜಯಂತ್ ಸಪಲ್ಯ, ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಪೂಜಾರಿ ಬದನಾಡಿ, ಶಕ್ತಿಕೇಂದ್ರ ಸಂಚಾಲಕರು,ಬೂತ್ ಸಮಿತಿ ಅಧ್ಯಕ್ಷರು,ಕಾರ್ಯದರ್ಶಿಗಳು,ಪಕ್ಷದ ಹಿರಿಯ ಕಾರ್ಯಕರ್ತರು, ಗ್ರಾಮಸ್ಥರು ಭಾಗವಹಿಸಿದರು. ರಶ್ಮಿತ್ ಶೆಟ್ಟಿ ಕೈತ್ರೋಡಿ ಸ್ವಾಗತಿಸಿ,ವಂದಿಸಿದರು.ಬಳಿಕ ಗ್ರಾ.ಪಂ.ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

By suddi9

Leave a Reply

Your email address will not be published. Required fields are marked *